Friday, 13th December 2024

ಐಎಂಎ ಜಿಲ್ಲಾಧ್ಯಕ್ಷರಾಗಿ ಡಾ.ರಂಗಸ್ವಾಮಿ ಅವಿರೋಧ ಆಯ್ಕೆ

ತುಮಕೂರು: ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿ ಗಳು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ.
ನಗರದ ಐಎಂಎ ಕಚೇರಿಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಸಂಬಂಧ ಚರ್ಚೆಗಳು ನಡೆದು ಅಂತಿಮ ವಾಗಿ ಅವಿರೋಧ ಆಯ್ಕೆ ಮಾಡಲು ತೀರ್ಮಾನಿಸಲಾಯಿತು.
ಸರ್ವ ಸದಸ್ಯರ ತೀರ್ಮಾನದಂತೆ 2023-24 ನೇ ಸಾಲಿಗೆ ಐಎಂಎ ಜಿಲ್ಲಾ ಘಟಕದ ಅಧ್ಯಕ್ಷ ರಾಗಿ ಡಾ. ಹೆಚ್.ವಿ. ರಂಗಸ್ವಾಮಿ, ಜಿಲ್ಲಾ ಕಾರ್ಯದರ್ಶಿಯಾಗಿ ಡಾ. ಮಹೇಶ್ ಜಿ., ಖಜಾಂಚಿಯಾಗಿ ಪ್ರದೀಪ್ ಪ್ರಭಾಕರ್ ಅವರು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ.
ಐಎಂಎ ಜಿಲ್ಲಾ ಘಟಕಕ್ಕೆ ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳನ್ನು ನಿರ್ಗಮಿತ ಅಧ್ಯಕ್ಷ ಡಾ. ಚಂದ್ರಶೇಖರ್ ಸೇರಿದಂತೆ ಎಲ್ಲ ಸದಸ್ಯರುಗಳು ಅಭಿನಂದಿಸಿದ್ದಾರೆ.