Wednesday, 11th December 2024

ಮಹಾತ್ಮ ಗಾಂಧಿ ಪರಿಕಲ್ಪನೆಯಂತೆ ನಾಡಿನ ಸ್ವಚ್ಛತೆ ಕಾಪಾಡಬೇಕು: ಡಾ.ಪ್ರಭಾಕರ್ ಅಭಿಮತ

ತುಮಕೂರು: ದೇಶಾದ್ಯಂತ ಗಾಂಧೀಜಿಯವರ ಜನ್ಮ ಜಯಂತಿಯನ್ನು ಆಚರಿಸುವ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಒಂದು ದಿನ ಮುನ್ನ ದೇಶಾದ್ಯಂತ ಒಂದು ಗಂಟೆಗಳ ಕಾಲ ಸ್ವಚ್ಛತಾ ಆಂದೋಲನದಲ್ಲಿ ಎಲ್ಲರೂ ಭಾಗವಹಿಸುವ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಪ್ರಧಾನಿ ಮೋದಿಯವರ ಆಶಯದಂತೆ ಎಲ್ಲರೂ ಸ್ವಚ್ಛತೆಯನ್ನ ಕಾಪಾಡಲು ಮುಂದಾಗಬೇಕು ಎಂದು ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಮಹಾವಿದ್ಯಾಲಯದ ಉಪ ಪ್ರಾಂಶುಪಾಲರಾದ ಡಾ.ಪ್ರಭಾಕರ್ ಅಭಿಪ್ರಾಯಪಟ್ಟರು.
ಶ್ರೀ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯ ಕಾಲೇಜು ಹಾಗೂ ಹೆಗ್ಗೆರೆ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಹೆಗ್ಗೆರೆ ಗ್ರಾಮದಲ್ಲಿ ಸ್ವಚ್ಛತಾ ಆಂದೋಲನ ಅಭಿಯಾನಕ್ವಕೆ ಚಾಲನೆ ನೀಡಿ ಮಾತನಾಡಿದರು.
ಭಾರತ ಸರ್ಕಾರ ನಾಡಿನ ಗಾಂಧಿ ಜಯಂತಿ ಕಾರ್ಯಕ್ರಮ ನಿಮಿತ್ತ ಹಿನ್ನೆಲೆಯಲ್ಲಿ ಸ್ವಚ್ಛತಾ ಸೇವಾ ಆಂದೋಲನ ಎಂಬ ಕಾರ್ಯಕ್ರಮದಡಿಯಲ್ಲಿ ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಘ ಸಂಸ್ಥೆಗಳ ಸಯೋಗದೊಂದಿಗೆ ತಮ್ಮ ಸ್ಥಳೀಯ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳುವ ಹಿನ್ನೆಲೆಯಲ್ಲಿ ಬೀದಿ ರಸ್ತೆಗಳು ರೈಲ್ವೆ ನಿಲ್ದಾಣ ಹಾಗೂ ಶಾಲಾ ಆವರಣಗಳನ್ನು ಸ್ವಚ್ಛಗೊಳಿಸುವುದರ ಮೂಲಕ ಸ್ವಚ್ಛತೆಯ ಕಡೆಗೆ ಒಂದು ಹೆಜ್ಜೆ ಇಡಲು ಮುಂದಾಗಿದ್ದೇವೆ ಎಂದು ತಿಳಿಸಿದರು.
ನಮ್ಮ ಸುತ್ತಮುತ್ತಲೂ ಉಂಟಾಗುವ ಅನೈರ್ಮಲ್ಯದಿಂದಾಗಿ ಸಾಂಕ್ರಾಮಿಕ ಕಾಯಿಲೆಗಳು ಹರಡುತ್ತಿದ್ದು, ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ತಾವೇ ಸ್ವತಃ ಸ್ವಚ್ಛತಾ ಕಾರ್ಯಕ್ಕೆ ಇಳಿಯುವ ಮೂಲಕ ಪೊರಕೆ ಹಿಡಿದು ಕಾರ್ಯುನಿರ್ತ್ತಿವಹಸಿದ್ದಾರೆ. ಹಿನ್ನೆಲೆಯಲ್ಲಿ ಗಾಂಧಿ ಜಯಂತಿಗೂ ಒಂದು ದಿನ ಮುನ್ನವೇ ದೇಶಾದ್ಯಂತ ಸ್ವಚ್ಛತೆಗೆ ಎಲ್ಲರೂ ಮುಂದಾಗಿದ್ದು, ನಮ್ಮ ಪರಿಸರವನ್ನ ಸ್ವಚ್ಛವಾಗಿ ಇಟ್ಟುಕೊಂಡರೆ ಉತ್ತಮವಾದ ಗಾಳಿ ದೊರಕಿ ಉತ್ತಮ ವಾದ ಆರೋಗ್ಯಕರವಾದ ಜೀವನ ನಡೆಸಬಹುದಾಗಿದೆ. ಗಾಂಧಿಯವರ ಪರಿಕಲ್ಪನೆಯಂತೆ ಸಮಾಜದ ಎಲ್ಲರೂ ಸ್ವಚ್ಛತೆಗೆ ಮುಂದಾಗಬೇಕು ಎಂದು ಕರೆ ನೀಡಿದರು.
ಹೆಗ್ಗೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸಂಪತ್ ಕುಮಾರ್ ಮಾತನಾಡಿ, ಸಿದ್ದಾರ್ಥ ವೈದ್ಯಕೀಯ ಮಹಾ ವಿದ್ಯಾಲಯವು ಹೆಗ್ಗೆರೆ ಗ್ರಾಮಸ್ಥರ ಸಹಯೋಗ ದೊಂದಿಗೆ ಗ್ರಾಮದ ಪ್ರಮುಖ ಸ್ಥಳಗಳನ್ನು ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ದೇಶದ ಸ್ವಚ್ಛ ಭಾರತ ಆಂದೋಲನ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಮುಂದಾಗಿದ್ದಾರೆ ಎಂದರು.
ಇದೇ ವೇಳೆ ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಹೆಗ್ಗೆರೆ ಗ್ರಾಮ ಪಂಚಾಯಿತಿಯ ಸ್ವಚ್ಛತಾ ಸಿಬ್ಬಂದಿಗಳೊAದಿಗೆ ಪೊರಕೆ ಮತ್ತು ಡಸ್ಟ್ ಬಿನ್ ಗಳನ್ನು ಹಿಡಿದು ಗ್ರಾಮದ ಪ್ರಮುಖ ಬೀದಿಗಳು ಸೇರಿದಂತೆ ರೈಲ್ವೆ ನಿಲ್ದಾಣ ಹಾಗೂ ಗ್ರಾಮ ಪಂಚಾಯಿತಿ ಕಚೇರಿ ಆವರಣದ ಕಸವನ್ನ ತೆಗೆದು ಸ್ವಚ್ಛಗೊಳಿಸಿದರು.
ಈ ಸ್ವಚ್ಛತಾ ಅಭಿಯಾನದಲ್ಲಿ ಸಾಹೇ ವಿವಿ ದೈಹಿಕ ಶಿಕ್ಷಣ ನಿರ್ದೇಶಕರಾದ ಶಶಿಧರ್ ಸೇರಿದಂತೆ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಗ್ರಾಪಂ ಸದಸ್ಯರು, ಸಿಬ್ಬಂದಿ ಹಾಗೂ ಸ್ಥಳೀಯ ನಾಗರಿಕರು ಭಾಗವಹಿಸಿದ್ದರು.