Tuesday, 17th September 2024

ಮೂರು ಕೋಟಿ ಮೌಲ್ಯದ ನಿಷೇಧಿತ ಇ-ಸಿಗರೇಟ್ ವಶಕ್ಕೆ

ಬೆಂಗಳೂರು: ಸಿಸಿಬಿ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ ಮೂರು ಕೋಟಿ ಮೌಲ್ಯದ ನಿಷೇಧಿತ ಇ-ಸಿಗರೇಟ್ ನ್ನು ವಶಕ್ಕೆ ಪಡೆದಿದ್ದಾರೆ.

ದುಬೈನಿಂದ ಬೆಂಗಳೂರಿಗೆ ತರಲಾಗುತ್ತಿದ್ದ ಇ-ಸಿಗರೇಟ್ ನ್ನು ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಒಂದು ಸಿಗರೇಟ್ ನ್ನು 5-6 ಸಾವಿರ ರೂಪಾಯಿಗೆ ಮಾರಾಟ ಮಾಡಲಾಗುತ್ತಿತ್ತು.

ಬ್ಲೂ ಡಾರ್ಟ್ ಕೊರಿಯರ್ ಮೂಲಕ ದುಬೈನಿಂದ ದೆಹಲಿಗೆ ಬಂದಿತ್ತು. ಅದನ್ನು ಬೆಂಗಳೂರಿಗೆ ತಂದು ಸುದ್ದಗುಂಟೆ ಪಾಳ್ಯದ ಮನೆಯೊಂದರಲ್ಲಿ ಇರಿಸ ಲಾಗಿತ್ತು. ಮನೆ ಮೇಲೆ ದಾಳಿ ನಡೆಸಿದ ಪೊಲಿಸ್ ಅಧಿಕರಿಗಳು 3 ಕೋಟಿ ಮೌಲ್ಯದ ಇ-ಸಿಗರೇಟ್ ವಶಕ್ಕೆ ಪಡೆದಿದ್ದಾರೆ. ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೇರಳ ಮೂಲದ ಶೋಹೇಬ್ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಹಲವು ಸ್ಮೋಕಿ ಜೋಜ್ ಹಾಗೂ ರೀಟೆಲ್ ಗಳಿಗೆ ಮಾರಾಟ ಮಾಡುತ್ತಿದ್ದ.

Leave a Reply

Your email address will not be published. Required fields are marked *