ತುಮಕೂರು : ಬದುಕಿನ ಎಲ್ಲ ಸಮಸ್ಯೆಗಳಿಗೆ ಶಿಕ್ಷಣವೇ ಪರಿಹಾರ. ಶಿಕ್ಷಣದಿಂದ ಬದುಕು ಕಟ್ಟಲು ಸಾಧ್ಯ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಪರ ನಿರ್ದೆಶಕರಾದ ವಿ.ಪಾತರಾಜ ಅವರು ಅಭಿಪ್ರಾಯ ವ್ಯಕ್ತ ಪಡಿಸಿದರು.
ನಗರದ ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿಂದು ವಾರ್ಷಿಕೋತ್ಸವ, ಸಾಂಸ್ಕೃತಿಕ ಚಟುವಟಿಕೆಗಳ ಸಮರೋಪ ಹಾಗೂ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭದಲ್ಲಿ ಗಿಡಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತ ನಾಡಿ ದರು.
ಇಂದಿನ ದಿನಮಾನದಲ್ಲಿ ವಿದ್ಯಾರ್ಥಿಗಳು ಜಾತಿ ಮೀರಿದ ಸಮಾಜ ಕಟ್ಟಬೇಕು-ವ್ಯಕ್ತಿತ್ವ ಮೀರಿ ಬದುಕಬೇಕು. ಅಂದಾಗ ಮಾತ್ರ ಸತ್ತಮೇಲು ಬದುಕಲು ಸಾಧ್ಯವಾಗುತ್ತದೆ ಎಂದ ಅವರು, ಗುರಿ ಇಟ್ಟು ಸಾಧಿಸಿದಾಗ ಮಾತ್ರ ಸತ್ತಮೇಲು ಬದುಕಲು ಸಾಧ್ಯ ವಾಗುತ್ತದೆ. ಜೀವನದಲ್ಲಿ ಗುರಿ ಇಟ್ಟು ಅದಕ್ಕೆ ಪೂರಕವಾದ ಶಿಕ್ಷಣ ಪಡೆದು ಯಶಸ್ಸಿನಡೆಗೆ ನಡೆಯಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಮನಸ್ಸಿನ ಕೊಳೆಯನ್ನು ಚೆಲ್ಲಿ, ನಿರ್ಮಲದಿಂದ ಇದ್ದಾಗ ಮಾತ್ರ ಸಮಾಜದಲ್ಲಿನ ಸಮಸ್ಯೆಗಳನ್ನು ಅರಿತುಕೊಳ್ಳಲು ಮತ್ತು ಸಾಧನೆ ಮಾಡಲು ಸಾಧ್ಯ. ಪೌರಾಣಿಕ ಪ್ರಾತಗಳಾದ ಕರ್ಣ, ಸತ್ಯ ಹರಿಶ್ಚಂದ್ರ, ರಾಮರ ಕತೆಗಳನ್ನು ಕೇಳುತ್ತಾ ಅವರ ವ್ಯಕ್ತಿತ್ವ ವನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೋಳ್ಳಬೇಕು ಎಂದು ವಿ.ಪಾತರಾಜ ಅವರು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ವಿಜಯ ಭಾಸ್ಕರ್ ಮಾತನಾಡಿ, ಅಂತಿಮ ವರ್ಷದ ವಿದ್ಯಾರ್ಥಿಗಳು ಮುಂದೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ. ಉನ್ನತ ಶಿಕ್ಷಣಕ್ಕಾಗಿ ಶ್ರಮಿಸಿ. ಶಿಕ್ಷಣದಿಂದ ಏನನ್ನಾದರೂ ಸಾಧನೆ ಮಾಡಿ ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಮುಖ್ಯ ಅತಿಥಿ ವಿ.ಪಾತರಾಜ ಹಾಗೂ ಪ್ರಾಂಶುಪಾಲರಾದ ಡಾ.ವಿಜಯ ಭಾಸ್ಕರ್ ಅವರುಗಳನ್ನು ಕಾಲೇಜಿನವತಿಯಿಂದ ಗೌರವಿಸಿ, ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಘಟಕದ ಕಾರ್ಯದರ್ಶಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ರಮೇಶ್ ಮಣ್ಣೆ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ.ಬಿ.ಟಿ.ಮುದ್ದೇಶ, ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು. ಉಪನ್ಯಾಸಕರಾದ ಆಶಾ ಕರ್ಯಕ್ರಮ ನಿರೂಪಿಸಿದರೆ, ಶ್ರೀನಿವಾಸ ವಂದನೆ ಸಲ್ಲಿಸಿದರು.