Sunday, 28th April 2024

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ: ಹಂತಕರಿಗೆ ಜೀವಾವಧಿ ಶಿಕ್ಷೆ

ಉಡುಪಿ: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೂರು ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ಗೆಳೆಯ ನಿರಂಜನ್ ಭಟ್ ಗೆ ಜೀವಿತಾವಧಿ ಶಿಕ್ಷೆ ನೀಡಲಾಗಿದೆ ಎಂದು ನ್ಯಾಯಧೀಶ ಸುಬ್ರಹ್ಮಣ್ಯ ಜೆ.ಎನ್. ತೀರ್ಪು ಪ್ರಕಟಿಸಿದ್ದಾರೆ.

ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ ನಂತರ ಹೋಮಕುಂಡದಲ್ಲಿ ಸುಟ್ಟಿದ್ದ ಭಾಸ್ಕರ್ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಹಾಗೂ ರಾಜೇಶ್ವರಿ ಗೆಳೆಯ ನಿರಂಜನ ಭಟ್‌ಗೆ ಶಿಕ್ಷೆ ಪ್ರಕಟವಾಗಿದೆ. ಉಡುಪಿ ಜಿಲ್ಲಾ ನ್ಯಾಯಾಲಯದಿಂದ ಜೂ.ಕ್ಕೆ ಶಿಕ್ಷೆ ತೀರ್ಪು ಪ್ರಕಟ ದಿನಾಂಕ ಮುಂದೂಡ ಲಾಗಿತ್ತು.  ಐದನೇ ಆರೋಪಿ ಚಾಲಕ ರಾಘವೇಂದ್ರ ಖುಲಾಸೆಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!