ಬೆಂಗಳೂರು: ಮಾ.19ರವರೆಗೆ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್ಲೈನ್ ಸ್ಥಗಿತವಾಗಿರಲಿದೆ ಎಂದು ಪ್ರಕಟಣೆ ತಿಳಿಸಿದೆ.
ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಆನ್ ಲೈನ್ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಮಾ.10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್ಲೈನ್ ಸೇವೆಗಳು (RAPDRP) ನಗರ ಪುದೇಶದ ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸೇರಿದಂತೆ ಯಾವುದೇ ಆನ್ ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ. ಆನ್ನೈನ್ ಸೇವೆಗಳು ಮಾತ್ರವೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಮಾಡುವುದಿಲ್ಲ.
ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು ಎಂದು ಪ್ರಕಟಣೆ ತಿಳಿಸಿದೆ.