Saturday, 14th December 2024

ಮೋದಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ: ಈಶ್ವರಪ್ಪ

ಶಿವಮೊಗ್ಗ : ಲೋಕಸಭೆ ಚುನಾವಣೆ ಟಿಕೆಟ್‌ ಘೋಷಣೆ ಬೆನ್ನಲ್ಲೇ ಬಂಡಾಯ ಸಾರಿರುವ ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಅವರು ನಾಳೆ ಶಿವಮೊಗ್ಗ ದಲ್ಲಿ ನಡೆಯುವ ಪ್ರಧಾನಿ ಮೋದಿ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ಹೇಳಿದ್ದಾರೆ.

ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡೇ ಮಾಡ್ತೀನಿ, ನಾಳೆ ಶಿವಮೊಗ್ಗದಲ್ಲಿ ನಡೆಯುವ ಪ್ರಧಾನಿ ಮೋದಿ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಯಾರೇ ಏನು ಹೇಳಿದ್ರೂ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಬಿ.ಎಸ್.‌ ಯಡಿಯೂರಪ್ಪ ನನಗೆ ಮಾತ್ರ ಅಲ್ಲ ಎಲ್ಲರಿಗೂ ಮೋಸ ಮಾಡಿದ್ದಾರೆ. ದೆಹಲಿಯ ವರಿಷ್ಠರು ಯಡಿಯೂರಪ್ಪರನ್ನು ದೊಡ್ಡ ನಾಯಕ ಅಂದುಕೊಂಡಿದ್ದಾರೆ. ಇನ್ನೂ ಅವರು ಭ್ರಮೆಯಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.