Saturday, 14th December 2024

ಗೆಳೆಯರ ಬಳಗದಿಂದ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆ

ದೇವದುರ್ಗ: ತಾಲೂಕುನಲ್ಲಿ ಗೆಳೆಯರ ಬಳಗ ಮಲದಕಲ್ ಹಾಗೂ ಜ್ಞಾನವೃಕ್ಷ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೇಂದ್ರ ದೇವದುರ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯ ದಿನಾ ಚರಣೆಯ ಅಮೃತ ಮಹೋತ್ಸವದ ನಿಮಿತ್ಯ ಜರುಗಿತು.

ದೇವದುರ್ಗ ತಾಲೂಕಿನ ಎಲ್ಲಾ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಕುರಿತಾದ ವಿಶೇಷ ಕಾರ್ಯಾಗಾರ ಮಸರಕಲ್ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಾಗಾರವನ್ನು ಶ್ರೀ ಬಸವರಾಜ ಪಾಟೀಲ್, ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ ಮಸರಕಲ್ ರವರು ಉದ್ಘಾಟಿಸಿದರು. ಕಾರ್ಯಗಾರದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮುಕ್ತಾಯಕ್ಕ ಮಹಿಳಾ ಪದವಿ ಪೂರ್ವ ಕಾಲೇಜ್ ದೇವದುರ್ಗದ.

ಉಪನ್ಯಾಸಕರಾದ ಶ್ರೀ ಕೆ. ವಿನೋದ್ ಕುಮಾರ್ ನಾಯಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ‌ ಶ್ರೀ ಷಣ್ಮುಖ ಹೂಗಾರ್ ಶಿಕ್ಷಕರು, ಸರ್ಕಾರಿ ಪ್ರಾಥಮಿಕ ಶಾಲೆ ಗೋವಿಂದಪಲ್ಲಿ ರವರು ವಿದ್ಯಾರ್ಥಿಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕು ಎಂಬುದನ್ನು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಸಮಗ್ರ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಿದರು.

ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಿದ್ದಣ್ಣ ಪರಮೇಶ್ವರ್ ಅವರು ಮಾತನಾಡುತ್ತಾ, ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಯನ್ನು ಈಗಿಂದಲೇ ಮಾಡಿಕೊಂಡು ಉತ್ತಮ ಭವಿಷ್ಯ ವನ್ನು ರೂಪಿಸಿಕೊಳ್ಳುವ ಮುಖಾಂತರ ನಮ್ಮ ಕಾಲೇಜಿಗೆ ಒಳ್ಳೆಯ ಹೆಸರನ್ನು ತರಬೇಕೆಂದು ವಿದ್ಯಾರ್ಥಿಗಳಿಗೆ ಕರೆಕೊಟ್ಟರು.

ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಹುಸೇನ್ ಬಾಷಾ ತಿಪ್ಪಲದಿನ್ನಿ, ಗೆಳೆಯರ ಬಳಗ ಮಲದಕಲ್ಲಿನ ಶ್ರೀ ಆಂಜ ನೇಯ ನಾಯಕ್.ಜ್. ಕಾಲೇಜಿನ ಉಪನ್ಯಾಸಕ ರಾದ ಶ್ರೀ ಬಸವರಾಜ್ ನಾಯಕ್, ಶ್ರೀ ಅಮರೇಶ್ ಸೇರಿದಂತೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು..