ಬಾಗೇಪಲ್ಲಿಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ೭೫ ನೇ ಹುಟ್ಟು ಹಬ್ಬದ ಆಚರಣೆ ಅಂಗವಾಗಿ
ಬಾಗೇಪಲ್ಲಿ : ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ೭೫ ನೇ ಹುಟ್ಟಿದ ಹಬ್ಬದ ಪ್ರಯುಕ್ತ ಸೋಮವಾರ ಬಾಗೇಪಲ್ಲಿ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹಾಗು ಯೋಜನಾ ಅಧಿಕಾರಿಗಳ ಸಹಭಾಗಿತ್ವದಲ್ಲಿ ನಲ್ಲಪ್ಪರೆಡ್ಡಿಪಲ್ಲಿ ಗ್ರಾಮದಲ್ಲಿ ಉಚಿತ ನೇತ್ರ ದಾನ ಶಿಬಿರವನ್ನು ಹಾಗೂ ಬಾಗೇಪಲ್ಲಿ ತಾಲ್ಲೂಕು ಸುಮಾರು ೭೦ ದೇವಾಲಯದ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಯೋಜನಾ ಅಧಿಕಾರಿಗಳಾದ ಪ್ರವೀಣ್ ಹೇಳಿದರು.
ಪಟ್ಟಣದ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಕಛೇರಿಯಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ೭೫ನೇ ಜನ್ಮದಿನದ ಅಂಗವಾಗಿ ಸ್ವಚ್ಛತಾ ಅಭಿಯಾನ ನಡೆಸಲಾಗುತ್ತಿದೆ.
ಸ್ವಯಂ ಸೇವಕರು ಶ್ರದ್ಧಾಕೇಂದ್ರಗಳಾದ ದೇವಸ್ಥಾನ, ಬಸದಿ, ಮಸೀದಿ, ಚರ್ಚ್ಗಳ ಸ್ವಚ್ಛತೆಯನ್ನು ಕೈಗೊಳ್ಳುತ್ತಾರೆ ಬಾಗೇಪಲ್ಲಿ ತಾಲೂಕಿನ ಸುಮಾರು ೭೦ ದೇವಸ್ಥಾನಗಳು ಸುತ್ತಲಿನ ಗಿಡಗಂಟಿಗಳ ತೆರವು, ಆವರಣ ಮತ್ತು ಒಳಾಂಗಣ ಸ್ವಚ್ಛತೆ, ದೇವಸ್ಥಾನದ ಕಲ್ಯಾಣಿ, ಸಭಾಭವನ, ಅಶ್ವಥ ಕಟ್ಟೆ, ಅರಳಿಕಟ್ಟೆ ಸ್ವಚ್ಛಗೊಳಿಸುವುದು, ಧಾರ್ಮಿಕ ಶ್ರದ್ಧಾಕೇಂದ್ರಗಳ ಸ್ನಾನಕಟ್ಟೆ, ನದಿ ತೀರಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಂಡು ಪ್ಲಾಸ್ಟಿಕ್, ಬಟ್ಟೆಬರೆ ಕಸಗಳನ್ನು ನದಿಗೆ ಎಸೆಯದಂತೆ ಅರಿವು ಮೂಡಿಸುವುದು ಮತ್ತಿತರ ಕಾರ್ಯಗಳು ನಡೆಯಲಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಅಧಿಕಾರಿಗಳಾದ ಪ್ರವೀಣ್ ತಿಳಿಸಿದ್ದಾರೆ.