Friday, 13th December 2024

ನೇಜಾರು ಬಳಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ

ಡುಪಿ: ಉಡುಪಿಯ ಸಂತೆಕಟ್ಟೆ ನೇಜಾರು ಬಳಿ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಹರಿತವಾದ ಆಯುಧಗಳಿಂದ ಇರಿದು ನಾಲ್ವರನ್ನು ಕೊಲೆ ಮಾಡಿದ ದುಷ್ಕರ್ಮಿ ಸ್ಥಳದಿಂದ ಪರಾರಿಯಾಗಿದ್ದಾನೆ. ತಾಯಿ ಹಾಗೂ ಮೂವರು ಮಕ್ಕಳನ್ನು ದುಷ್ಕರ್ಮಿ ಕೊಲೆಗೈದಿದ್ದಾನೆ.

ಮೃತರನ್ನು ತಾಯಿ ಹಸೀನಾ (46), ಮಕ್ಕಳಾದ ಅಫ್ನಾನ್ (23), ಅಯ್ನಝ್ (21), ಆಸಿಂ (12) ಎಂದು ಗುರುತಿಸಲಾಗಿದೆ.

ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿ ಮಾತಿನ ಚಕಮಕಿ ನಡೆಸಿದ್ದಾನೆ. ಮೊದಲು ಹಸೀನಾ, ಅಫ್ನಾನ್ ಹಾಗೂ ಅಯ್ನಾಝ್‌ಗೆ ಇರಿದಿದ್ದಾನೆ. ಈ ವೇಳೆ, ಹೊರಗಡೆ ಆಟವಾಡುತ್ತಿದ್ದ ಆಸಿಂ ಸದ್ದು ಕೇಳಿ ಮನೆ ಒಳಗಡೆ ಬಂದಿದ್ದಾನೆ. ನಂತರ ಕಿರಿಯ ಮಗನನ್ನೂ ಕೊಂದ. ಮನೆಯಿಂದ ಬೊಬ್ಬೆ ಕೇಳಿ ಪಕ್ಕದ ಮನೆ ಯುವತಿ ಹೊರಗಡೆ ಬಂದಿದ್ದಾರೆ. ಆಕೆಯನ್ನೂ ಬೆದರಿಸಿ ಸ್ಥಳದಿಂದ ದುಷ್ಕರ್ಮಿ ಕಾಲ್ಕಿತ್ತಿದ್ದಾನೆ.

ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.