Sunday, 15th December 2024

ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ವಿಷ ಸೇವಿಸಿ ಆತ್ಮಹತ್ಯೆ

ಬೆಂಗಳೂರು: ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಎರಡು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ದರ್ಶನ್‌ ಬಳಿ ಹಲವು ವರ್ಶಗಳಿಂದ ಕೆಲಸ ಮಾಡಿಕೊಂಡಿದ್ದ ಶ್ರೀಧರ್‌ (35) ವಿಷ ಸೇವಿಸಿ ಏ. 17 ರಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆತ ಕಾಣೆಯಾಗಿದ್ದಾನೆಂದು ಎಲ್ಲರೂ ಭಾವಿಸಿದ್ದರು. ಆದರೆ ಶವ ಪತ್ತೆಯಾಗಿದ್ದು, ಜೊತೆಗೆ ಆತ ಸಾಯುವ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ ಕೂಡ ಪತ್ತೆಯಾಗಿದೆ. ಕೀಟನಾಶಕ ಸೇವನೆ ಮಾಡಿ ಶ್ರೀಧರ್‌ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಒಂಟಿತನ ತಡೆಯಲಾರದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಆತ ಸಾಯುವ ಮುನ್ನ ಬರೆದಿಟ್ಟಿದ್ದು, ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.