Friday, 13th December 2024

ನಾಳೆ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ

ಚಿತ್ರದುರ್ಗ: ದಕ್ಷಿಣ ಕಾಶಿ ಎಂದೇ ಖ್ಯಾತಿಯ ಹಿರಿಯೂರು ನಗರದ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಫೆ.7 ರಂದು ಮಧ್ಯಾಹ್ನ ಜರುಗಲಿದೆ. ಮಾಘ ನಕ್ಷತ್ರದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬ್ರಹ್ಮ ರಥೋತ್ಸವ ಜರುಗಲಿದೆ.

ಜಾತ್ರೆ ಹಿನ್ನೆಲೆಯಲ್ಲಿ ಜನವರಿ 27ರಿಂದ ದೇವಾಲಯದಲ್ಲಿ ಪ್ರತಿನಿತ್ಯ ವಿವಿಧ ಧಾರ್ಮಿಕ, ಪೂಜಾ ಕಾರ್ಯಕ್ರಮಗಳು ನಡೆಯುತ್ತಿವೆ.

ದೇವರ ರಥೋತ್ಸವ ಕಾರ್ಯಕ್ರಮಕ್ಕೆ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಆಗಮಿಸಲಿದ್ದು, ದೇವರಿಗೆ ಪೂಜೆ ಸಲ್ಲಿಸಿ ಜಾತ್ರೆಗೆ ಚಾಲನೆ ನೀಡಲಿದ್ದಾರೆ. ಜೊತೆಗೆ ಶಾಸಕಿಗೆ ಮುಜರಾಯಿ ಇಲಾಖೆ ಅಧಿಕಾರಿಗಳು ಸಾಥ್ ನೀಡಲಿದ್ದಾರೆ. ನಂತರ ಸ್ವಾಮಿಯ ಮುಕ್ತಿ ಬಾವುಟದ ಹರಾಜು ಪ್ರಕ್ರಿಯೆ ನಡೆಯಲಿದೆ. ಬಳಿಕ ಸಾವಿರಾರು ಭಕ್ತರು ರಥವನ್ನು ಸಿದ್ದನಾಯಕ ವೃತ್ತದವರೆಗೂ ಎಳೆಯುವ ಮೂಲಕ ಭಕ್ತಿ ಭಾವವನ್ನು ಅರ್ಪಿಸುತ್ತಾರೆ.

ಬುಡಕಟ್ಟು ಕಾಡುಗೊಲ್ಲರ ಆರಾಧ್ಯದೈವನಾದ ಪಶುಪಾಲಕ ವೀರಕರಿಯಣ್ಣ ದೇವರು ಬರುವವರೆಗೂ ಶ್ರೀ ತೇರು ತೆರುಮಲ್ಲೇಶ್ವರನ ರಥ ಮುಂದಕ್ಕೆ ಚಲಿಸುವುದಿಲ್ಲ. ಹಿರಿಯೂರು ತಾಲೂಕಿನ ಬೀರನಹಳ್ಳಿ ಮುಜರೆ ಗ್ರಾಮದ ಕರಿಯ್ಯನಹಟ್ಟಿ ಗ್ರಾಮದ ವೀರ ಕರಿಯಣ್ಣ ದೇವರು ತೇರುಮಲ್ಲೇಶ್ವರ ಆಸ್ಥಾನಕ್ಕೆ ಬಂದಾಗ ರಥೋತ್ಸವ ವಿಜೃಂಭಣೆಯಿಂದ ಜರುಗುವುದು ಜಾತ್ರೆಯ ವಿಶೇಷವಾಗಿದೆ.

ಮನ ಗೆಲ್ಲುವುದು ವಾಡಿಕೆಯಾಗಿತ್ತು. ಕಾರ್ತಿಕ ಮಾಸ ಹಾಗೂ ಜಾತ್ರೆಯ ಸಂದರ್ಭದಲ್ಲಿ ಸೌಟುಗಳಲ್ಲಿ ದೀಪ ಹಚ್ಚುವ ಸಂಪ್ರ ದಾಯ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ದೀಪದ ಬೆಳಕು ರಾತ್ರಿ ವೇಳೆ ಮೂರು ಕಿಲೋ ಮೀಟರ್ ದೂರದ ವರೆಗೂ ಕಾಣುತ್ತದೆ. ಅಲ್ಲದೇ ಹಿರಿಯೂರು ತಾಲೂಕು ಸೇರಿದಂತೆ ಚಿತ್ರದುರ್ಗ, ಚಳ್ಳಕೆರೆ, ದಾವಣಗೆರೆ, ಹೊಸದುರ್ಗ ಮತ್ತಿತರರ ಭಾಗ ಗಳಿಂದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ.