Saturday, 14th December 2024

ಕಂಬಳದ ’ಉಸೇನ್ ಬೋಲ್ಟ್’ ಶ್ರೀನಿವಾಸ ಗೌಡ ವಿರುದ್ಧ ದೂರು ದಾಖಲು

ಮಂಗಳೂರು : ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಶ್ರೀನಿವಾಸ ಗೌಡ ವಿರುದ್ಧ ದೂರು ದಾಖಲಾಗಿದೆ.

ಶ್ರೀನಿವಾಸ ಗೌಡ ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ, ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಹಣ ಮತ್ತು ಸಾರ್ವಜನಿ ಕರಿಗೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮೂಡಬಿದ್ರೆ ಪೊಲೀಸ್ ಠಾಣೆಗೆ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ ಲೋಕೇಶ್ ಶೆಟ್ಟಿ ಎಂಬವರು ದೂರು ನೀಡಿದ್ದಾರೆ.

ಕಂಬಳ ಓಟಗಾರ ಶ್ರೀನಿವಾಸ ಗೌಡ, ಕಂಬಳ ಅಕಾಡೆಮಿ ನಡೆಸುವ ಗುಣಪಾಲ ಕಡಂಬ ಮತ್ತು ಲೇಸರ್ ಬೀಮ್ ಮೂಲಕ ಕಂಬಳದ ಫಲಿತಾಂಶ ಘೋಷಿಸುವ ಸ್ಕೈ ವೀವ್ ಮಾಲೀಕ ರತ್ನಾಕರ ಎಂಬವರ ವಿರುದ್ದ ಕ್ರಿಮಿನಲ್ ದೂರು ನೀಡಲಾಗಿದೆ.