Sunday, 19th May 2024

ಕೆಎಸ್ಆರ್ಟಿಸಿ ಬಸ್ ನಲ್ಲಿ ಪರೀಕ್ಷೆಗೆ ತೆರಳಲು ಉಚಿತ ಪ್ರಯಾಣ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಮಾ.28 ರಿಂದ ಎಪ್ರೀಲ್ 11 ವರೆಗೆ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪರೀಕ್ಷೆಗೆ ತೆರಳಲು, ಪರೀಕ್ಷೆ ಬರೆದು ಮನೆಗೆ ವಾಪಾಸ್ ಸಾಧ್ಯವಾಗುವಂತೆ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಿದೆ. ಕೆ ಎಸ್ ಆರ್ ಟಿ ಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆಯಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಸಾರಿಗೆ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

error: Content is protected !!