Sunday, 15th December 2024

ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಬುರ್ಖಾ ವೇಷದಲ್ಲಿದ್ದ ಪುರುಷ…!

ಧಾರವಾಡ: ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾಣದಲ್ಲಿ ಬುರ್ಖಾ ವೇಷ ಹಾಕಿಕೊಂಡ ಪುರುಷನೋರ್ವ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಸಂಶಿ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಬಸ್‌ ಪ್ರಯಾಣಿಕರು ವ್ಯಕ್ತಿ ಬಗ್ಗೆ ಸಂಶಯ ವ್ಯಕ್ತವಾಗಿ ಒತ್ತಾಯದಿಂದ ಬುರ್ಖಾ ತೆಗಸಿ ದಾಗ ಸತ್ಯಾಂಶ ತಿಳಿದು ಬಂದಿದೆ.

ಸಾರ್ವಜನಿಕರು ವ್ಯಕ್ಯಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಬುರ್ಖಾ ಧರಿಸಿದ್ದ ವ್ಯಕ್ತಿಯೇ ನಾನು ಭಿಕ್ಷಾಟನೆಗೆ ಬಂದಿದ್ದೇನೆ. ಹೆಸರು ವೀರಭದ್ರಯ್ಯ ನಿಂಗಯ್ಯ ಮಠಪತಿ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕು ಘೋಡಗೋರಿ ನಮ್ಮೂರು ಎಂದು ಒಪ್ಪಿಕೊಂಡಿದ್ದಾನೆ.

ಸಾಮಾಜಿಕ ಜಾಲತಾಣದಲ್ಲಿ ಮೂರ್ನಾಲ್ಕು ಜನ ಯುವಕರು ಸೀರೆಯುಟ್ಟು ಬಸ್‌ಗಾಗಿ ಕಾಯುವ ದೃಶ್ಯ ವೈರಲ್‌ ಆಗಿತ್ತು.