Saturday, 27th April 2024

ತೆಂಕುತಿಟ್ಟು ಯಕ್ಷಗಾನದ ಭಾಗವತ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ

ಮಂಗಳೂರು: ತೆಂಕುತಿಟ್ಟು ಯಕ್ಷಗಾನದ ಭಾಗವತ ಪದ್ಯಾಣ ಗಣಪತಿ ಭಟ್ ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಕೆಲವು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಬಳಿಕ ಚೇತರಿಸಿ ಕೊಂಡು ಮನೆಗೆ ಮರಳಿದ್ದರು. ಮಂಗಳವಾರ ಬೆಳಿಗ್ಗೆ 7.30ಕ್ಕೆ ಹೃದಯಾಘಾತಕ್ಕೊಳಗಾಗಿ ನಿಧನರಾದರು ಎಂದು ಮೂಲಗಳು ತಿಳಿಸಿವೆ.

ಗಣಪತಿ ಭಟ್ಟರು ಸುಮಾರು 4 ದಶಕಗಳಿಗೂ ಹೆಚ್ಚು ಕಾಲ ಯಕ್ಷರಂಗದಲ್ಲಿ ಭಾಗವತರಾಗಿ ಮೆರೆದಿದ್ದರು. ಸುರತ್ಕಲ್, ಕರ್ನಾಟಕ, ಹೊಸನಗರ, ಎಡ ನೀರು, ಹನುಮಗಿರಿ ಸೇರಿದಂತೆ ಹಲವು ವ್ಯವಸಾಯಿ ಯಕ್ಷಗಾನ ಮೇಳಗಳಲ್ಲಿ ಭಾಗವತರಾಗಿದ್ದರು.

Leave a Reply

Your email address will not be published. Required fields are marked *

error: Content is protected !!