ತುಮಕೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ತುಮಕೂರು ಇವರ ನೇತೃತ್ವದಲ್ಲಿ ನಗರದ ಬಿ.ಜಿ.ಎಸ್. ವೃತ್ತದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿರುವ 7ನೇ ವರ್ಷದ ಹಿಂದೂ ಮಹಾಗಣಪತಿಯ ಅದ್ದೂರಿ ಮಹೋತ್ಸವ ಸೆ. 21 ರಂದು ನಡೆಯಲಿದೆ.
ಮೆರವಣಿಗೆ ಯಾತ್ರೆಯು ನಗರದ ಬಿಜಿಎಸ್ ವೃತ್ತದಿಂದ ಆರಂಭಗೊಂಡು ಲಕ್ಕಪ್ಪ ವೃತ್ತ, ಜೆ.ಸಿ. ರಸ್ತೆ, ಬಂಡಿಪೇಟೆ ವೃತ್ತ, ಸ್ವತಂತ್ರ ಚೌಕ, ಅಶೋಕ ರಸ್ತೆ, ಬಿಜಿಎಸ್ ವೃತ್ತ, ಎಂಜಿ ರಸ್ತೆ, ಜೈನ್ ಟೆಂಪಲ್ ರಸ್ತೆ, ರಾಮಪ್ಪ ವೃತ್ತ, ಡಾ. ಬಿ ಆರ್ ಅಂಬೇಡ್ಕರ್ ರಸ್ತೆ, ಕೋಟೆ ಆಂಜನೇಯಸ್ವಾಮಿ ವೃತ್ತ, ಗಾರ್ಡನ್ ರಸ್ತೆ ಮುಖೇನ ಸಾಗಿ ಕೆ.ಎನ್.ಎಸ್. ಕಲ್ಯಾಣಿಯಲ್ಲಿ ಗಣೇಶಮೂರ್ತಿಯನ್ನು ವಿಸರ್ಜಿಸಲಾಗುವುದು.
ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳಾದ ನಂದಿ ಧ್ವಜ, ನಾಸಿಕ್ ಡೋಲ್, ವೀರಗಾಸೆ, ಡಂಕವಾದ್ಯ, ತಮಟೆ ವಾದ್ಯ ಪಾಲ್ಗೊಳ್ಳಲಿವೆ.
ಗಣೇಶಮೂರ್ತಿ ಮೆರವಣಿಗೆ ಸಾಗುವ ಪ್ರಮುಖ ವೃತ್ತಗಳಲ್ಲಿ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ.
ಈ ಬಾರಿಯ ಮೆರವಣಿಗೆಯ ಪ್ರಮುಖ ಆಕರ್ಷಣೆ ರಾಧೆ ಕೃಷ್ಣ ಕೋಲಾಟ ಜಟಾಯು ನಾಸಿಕ್ ಡೋಲ್ ವೀರ ಸಾವರ್ಕರ್ ಪ್ರತಿಮೆ, ಛತ್ರಪತಿ ಶಿವಾಜಿ ಮಹಾರಾಜ್, ವಾಯುಪುತ್ರ ಆಂಜನೇಯ ಟ್ಯಾಬ್ಲೋ ಕಲ್ಲಡ್ಕರಿಂದ ಮತ್ತು ಇತರೆ ಜಾನಪದ ಕಲಾ ತಂಡಗಳೊಂದಿಗೆ ಜರುಗಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಕಾರ್ಯದರ್ಶಿ ಜಿ.ಕೆ. ಶ್ರೀನಿವಾಸ್ ತಿಳಿಸಿದ್ದಾರೆ.
ಇದನ್ನೂ ಓದಿ: Ganeshotsava: ಗಣೇಶೋತ್ಸವದ ಮೂಲಕ ಬ್ರಿಟೀಷರ ಒಡೆದು ಆಳುವ ನೀತಿಗೆ ಸೆಡ್ಡು ಹೊಡೆ ದವರು ತಿಲಕರು- ನ್ಯಾ.ಎನ್.ಕುಮಾರ್ ಅಭಿಮತ