ಬೆಳಗಾವಿ: ಸ್ವಾತಂತ್ರ್ಯ ಸಂಗ್ರಾಮಕ್ಕೆ ಜನರನ್ನು ಒಟ್ಟುಗೂಡಿಸಲು ಬೆಳಗಾವಿಯಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷಕ್ಕೆ ಕಾಲಿಟ್ಟಿದೆ.
ಇದು ರಾಜ್ಯದಲ್ಲೇ ಮೊಟ್ಟ ಮೊದಲ ಸಾರ್ವಜನಿಕ ಗಣಪತಿ ಉತ್ಸವ ಮಂಡಳಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.
ಬ್ರಿಟಿಷರ ವಿರುದ್ಧ ಚಳುವಳಿ ನಡೆಯುತ್ತಿದ್ದ ಸಂದರ್ಭ. ಜನರನ್ನು ಸಂಘಟಿಸಿ, ಹೋರಾಟ ತೀವ್ರಗೊಳಿಸಬೇಕೆಂಬ ಉದ್ದೇಶದಿಂದ ಗಣೇಶೋತ್ಸವವನ್ನು ಸಾರ್ವಜನಿಕವಾಗಿ ಆಚರಿಸಲು ಬಾಲಗಂಗಾಧರ ತಿಲಕರು ಕರೆ ನೀಡಿದ್ದರು. 1893ರಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ಮೊಟ್ಟ ಮೊದಲ ಸಾರ್ವಜನಿಕ ಗಣೇಶೋತ್ಸವ ಆರಂಭಿಸುತ್ತಾರೆ. ನಂತರ ಮುಂಬೈನಲ್ಲೂ ಆರಂಭವಾಗುತ್ತದೆ. ಇದರ ಪ್ರಭಾವ ಪಕ್ಕದ ಕರ್ನಾಟಕ ರಾಜ್ಯದ ಬೆಳಗಾವಿ ಮೇಲೂ ಬೀರುತ್ತದೆ.
378 ಸಾರ್ವಜನಿಕ ಮಂಡಳಿಗಳು: ಬೆಳಗಾವಿ ನಗರದಲ್ಲಿ ಸದ್ಯ ಒಟ್ಟು 378 ಸಾರ್ವಜನಿಕ ಗಣೇಶ ಉತ್ಸವ ಮಂಡಳಿಗಳು ಇದೆ.