Friday, 13th December 2024

ಗ್ಯಾಸ್‌ ಟ್ಯಾಂಕರ್ ಲಾರಿ- ಕಾರಿನ ರಸ್ತೆ ಅಪಘಾತ: ಮಹಿಳೆಯರ ಸಾವು

ಚಿತ್ರದುರ್ಗ: ಗ್ಯಾಸ್‌ ಟ್ಯಾಂಕರ್ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಮದಕರಿಪುರಿ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರು ಮೂಲದ ವಿನುತಾ (40) ನಿರ್ಮಲಾ (55), ಮೃತ ಮಹಿಳೆಯರು ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಫಣಿರಾಜ್, ರಶ್ಮಿ, ಯಶಸ್ ಎಂಬ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಿಂದ ಕಾರಿನಲ್ಲಿ ಹೊಸಪೇಟೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎನ್ನಲಾಗಿದೆ.