ಗೌರಿಬಿದನೂರು: ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಒಂದು ದಿನದ ಸಾಂಕೇತಿಕ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಮುಖಂಡ ಹಾಲಗಾನಹಳ್ಳಿ ಗಂಗಾಧರ್ ತಿಳಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಒಳಮೀಸಲಾತಿ ಹೋರಾಟದ ಕುರಿತ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ರಾಜ್ಯಾದ್ಯಂತ ಇದೇ ತಿಂಗಳು ೧೬ ನೇ ತಾರೀಖು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಏಕಕಾಲದಲ್ಲಿ ಒಂದೇ ದಿನ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಹಾಗೂ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಆದ್ದರಿಂದ ನಮ್ಮ ತಾಲೂಕಿನಿಂದ ಎಲ್ಲಾ ಮಾದಿಗ ಸಮುದಾಯದ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೇರಿ ದಲಿತ ಸಂಘಟನೆಗಳ ಒಕ್ಕೂಟದ ಅಡಿಯಲ್ಲಿ ಸುಮಾರು ಐದು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಧರಣಿ ಯನ್ನು ಯಶಸ್ವಿಯಾಗಿ ನಡೆಸಿಕೊಡಬೇಕೆಂದು ಕರೆ ನೀಡಿದರು.
ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸಿ ಚನ್ನಪ್ಪ ಮಾತನಾಡಿ ತಾಲೂಕಿನಾದ್ಯಂತ ಪ್ರತಿಯೊಂದು ಹಳ್ಳಿಗಳಿಗೆ ಮುಖಂಡರು ಬೇಟಿ ನೀಡಿ ಒಳ ಮೀಸಲಾತಿಯ ಕುರಿತು ಸಮುದಾಯದವರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಹಾಗೂ ಹೋಬಳಿಗೆ ಒಂದರAತೆ ಕಾರ್ಯಕ್ರಮದ ಪ್ರಚಾರಕ್ಕಾಗಿ ಆಟೋ ಬಿಡಲಾಗುವುದು ಹಾಗೂ ಆಯಾಯ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅವರವರ ಹೋಬಳಿ ಮಟ್ಟದಲ್ಲಿ ಹಾಗೂ ಗ್ರಾಮಗಳ ಮಟ್ಟದಲ್ಲಿ ನಮ್ಮ ಸಮುದಾಯದ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗುವುದು ೧೬ ನೇ ತಾರೀಖು ನಗರದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗಾಂಧಿ ವೃತ್ತದವರೆಗೆ ಮೆರವಣಿಗೆ ಮೂಲಕ ಬಂದು ಅಲ್ಲಿಂದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಡಬೇಕೆಂದು ಎಲ್ಲರಲ್ಲೂ ಮನವಿ ಮಾಡಿದರು.
ಕೆಎಸ್‌ಎಸ್ ಡಿ ಜಿಲ್ಲಾ ಉಪಾಧ್ಯಕ್ಷ ಎಂ.ಆರ್ ಸತ್ಯನಾರಾಯಣ ಮಾತನಾಡಿ ತಾಲೂಕಿನಲ್ಲಿ ದಲಿತರ ಸಮಸ್ಯೆಗಳು ಹಾಗೂ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಹಾಗೂ ಆಗಸ್ಟ್ ಒಂದನೇ ತಾರೀಖು ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಒಳಮೀಸಲಾತಿ ಜಾರಿ ಮಾಡಲು ಆಯಾಯ ರಾಜ್ಯಗಳಿಗೆ ಅಧಿಕಾರವಿದೆ ಎಂದು ತೀರ್ಪು ನೀಡಿರುವುದು ಸ್ವಾಗತಾರ್ಹ ಆದರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳಮೀಸಲಾತಿ ಜಾರಿಗೆ ತರಲು ಮೀನಾಮೇಷ ಎಣಿಸುತ್ತಿದ್ದಾರೆ ಆದ್ದರಿಂದ ನಮ್ಮ ತಾಲೂಕಿನಿಂದ ೧೬ ನೇ ತಾರೀಖು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಡೆಯುವ ಧರಣಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪದಾಧಿ ಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಡಬೇಕೆಂದು ಎಲ್ಲರಲ್ಲೂ ಮನವಿ ಮಾಡಿದರು.
ಸಭೆಯಲ್ಲಿ ಮುಖಂಡರಾದ ಸನಂದಕುಮಾರ್. ಎಂ ಗಂಗಾಧರಪ್ಪ. ನಾರಾಯಣಪ್ಪ. ವಕೀಲ ನರಸಿಂಹಮೂರ್ತಿ. ಆದೀಶ್ . ಬಾಲಯ್ಯ. ಎನ್ ಗಂಗಾಧರಪ್ಪ. ಮಂಜುನಾಥ. ಅಶ್ವತ್. ವೆಂಕಟೇಶ್. ನಾರಾಯಣಸ್ವಾಮಿ. ಗಂಗಾಧರಪ್ಪ. ರಮೇಶ್. ಬಾಬು. ನಾಗರಾಜು ಹಾಗೂ ಇನ್ನಿತರರು ಭಾಗವಹಿಸಿದ್ದರು.