Sunday, 15th December 2024

ಅ.28 ರಂದು ಕೋಟಿ ಕಂಠ ಗಾಯನ ಕಾರ್ಯಕ್ರಮ

ಗುಬ್ಬಿ: ಅಕ್ಟೋಬರ್ 28 ರಂದು ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸ ಬೇಕೆಂದು ತಹಶೀಲ್ದಾರ್ ಬಿ.ಆರತಿ ತಿಳಿಸಿದರು.

ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಪಾಲ್ಗೊಂಡು ಹಾಡಲು ಇಚ್ಛಿಸುವವರು ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಹೆಸರುಗಳನ್ನು ನೋಂದಾಯಿಸಬೇಕೆಂದು ತಿಳಿಸಿದರು.
ತಾಲೂಕಿನಲ್ಲಿ ನಿಂತರವಾಗಿ ಸುರಿಯುತ್ತಿರುವ ಅಧಿಕ ಮಳೆಯಿಂದಾಗಿ ನೂರಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿದ್ದು ಮಳೆಯಿಂದಾಗುವ ಅನಾಹುತಗಳನ್ನು ಕೂಡಲೆ ತಿಳಿ ಯಲು ತಾಲ್ಲೂಕು ಆಡಳಿತ ಹೆಲ್ಪ್ ಲೈನ್ ತೆರೆದಿದ್ದು ದೂರವಾಣಿ ಸಂಖ್ಯೆ 08131-222234 ಕರೆ ಮಾಡುವ ಮೂಲಕ ಸ್ಥಳೀಯ ಸಮಸ್ಯೆಗಳನ್ನು ತಿಳಿಸಬಹುದೆಂದು ತಿಳಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡುವ ಮೂಲಕ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದೆಂದು ತಿಳಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಬಿ ಆರತಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುಳಾದೇವಿ ಇದ್ದರು.