ಪಾವಗಡ : ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಅವರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಜೊತೆಗೆ ವಿದ್ಯಾರ್ಥಿ ಗಳಲ್ಲಿ ಆತ್ಮಸ್ಥೆರ್ಯ ತುಂಬಿ ಅವರನ್ನು ದೇಶಕ್ಕೆ ಉತ್ತಮ ಪ್ರಜೆಗಳನ್ನಾಗಿ ಮಾಡುವ ಕೆಲಸ ಪೋಷಕರು ಮತ್ತು ಶಿಕ್ಷಕರ ಕೈಯಲ್ಲಿ ಇದೇ ಎಂದು ಮಾಜಿ ಸಚಿವ ಹಾಲಿ ಶಾಸಕ ವೆಂಕಟರಮಣಪ್ಪ ತಿಳಿಸಿದರು.
ಪಾವಗಡ 75ನೇ ಸ್ವಾತಂತ್ರ್ಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಥಸಂಚಲನ ಕಾರ್ಯಕ್ರಮ ನೆರವೇರಿಸಿ ಮಾತನಾ ಡಿದ ಅವರು 75ನೇ ಸ್ವಾತಂತ್ರ್ಯ ಕ್ಕೆ ಹೋರಾಟ ಮೂಲಕ ತ್ಯಾಗ ಹಾಗೂ ಬಲಿದಾನವನ್ನು ಸ್ವಾತಂತ್ರ್ಯ ಕಲ್ಪಸಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟ ದೇಶ ಪ್ರೇಮಿಗಳನ್ನು ಮುಂದಿನ ಪೀಳಿಗೆಗೆ ತಿಳಿಸುವಂತಾಗಬೇಕು ಎಂದರು.
ಶಾಲೆಯಲ್ಲಿರುವ ವಿದ್ಯಾಬ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನುರಿತ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಅವರನ್ನು ದೇಶಕ್ಕೆ ಉತ್ತಮ ಪ್ರಜೆಗಳನ್ನಾಗಿ ಮಾಡುವ ಉದ್ದೇಶ ನಮ್ಮದಾಗಿದ್ದು ಶಾಲೆಯಲ್ಲಿರುವ ವಿದ್ಯಾರ್ಥಿಗಳನ್ನು ನಾಲ್ಕು ತಂಡ ಗಳಾಗಿ ವಿಂಗಡಿಸಿ ತಂಡಕ್ಕೆ ಒಬ್ಬ ಶಿಕ್ಷರನ್ನು ಲೀಡರ್ ಮಾಡಿ ಆ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಗೂ ನಾಯಕತ್ವ ಗುಣಗಳನ್ನು ಬೆಳೆಸುವುದು ನಮ್ಮ ಉದ್ದೇಶವಾಗಿದೆ ಎಂದರು.
ವಿದ್ಯಾರ್ಥಿಗಳು ಕಲಿಕೆಯ ಸಮಯದಲ್ಲಿ ಬೇರೆಡೆಗೆ ಆಕರ್ಷಣೆಗೆ ಒಳಗಾಗದೆ ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ತಾವು ಓದಿದ ಶಾಲೆಗೆ ಮತ್ತು ಗ್ರಾಮಕ್ಕೆ ಹೆಸರು ತರುವಂತಹ ಕೆಲಸವನ್ನು ಮಾಡಬೇಕು ಎಂದು ಹೇಳಿದರು.
ತಹಶಿಲ್ದಾರ್ ವರದರಾಜ ಧ್ವಜಾರೋಹಣ ನೆರವೇರಿಸಿ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಿಟ್ಟು ಇಂತಹ ಕಾರ್ಯಕ್ರಮಕ್ಕೆ ಅನು ಮಾಡಿಕೊಟ್ಟಂತಹ ಮಹಾನ್ ವ್ಯಕ್ತಿಗಳಿಗೆ ಸ್ಮರಿಸುವಂತಹ ಕಾರ್ಯಕ್ರಮ ಇದಾಗಬೇಕಾಗಿದೆ.
ತಾಲೂಕಿನಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ತಮ್ಮ ಪ್ರಾಣವನ್ನೇ ಬಲಿದಾನಕ್ಕಾಗಿ ಶ್ರಮಿಸಿದಂತಹ ಮಹಾನ್ ವ್ಯಕ್ತಿಗಳು ನಮ್ಮಲ್ಲಿ ಕಾಣಬಹುದಾಗಿದೆ.
ಈ ವೇಳೆ ತಾಲೂಕು ಪಂಚಾಯಿತಿ ಇಓ ಶಿವರಾಜಯ್ಯ ಪುರಸಭೆ ಅಧ್ಯಕ್ಷರಾದ ವೇಲು ರಾಜು. ಬಿಇಓ. ಅಶ್ವಥ್ ನಾರಾಯಣ.ಸಿಪಿಐ ಕಾಂತ ರೆಡ್ಡಿ. ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು
ದೈಹಿಕ ಶಿಕ್ಷಕರು ಉತ್ತಮ ರೀತಿಯಲ್ಲಿ ಕಾರ್ಯಕ್ರಮ ನೆರೆವಹಿಸಿಕೊಟ್ಟರು.ಈ ವೇಳೆ ತಾಡಪ್ಪ.ರಾಮಾಂಜಿನಪ್ಪ.ಬಾಲರಾಜ್.ಪೊ ತ್ ರೆಡ್ಡಿ. ಪರಂಧಾಮ ರೆಡ್ಡಿ ಕಾರ್ಯಕ್ರಮದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.