Thursday, 12th December 2024

ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸರ್ಕಾರಿ ಬಸ್ ಅಪಘಾತ: ಐವರಿಗೆ ಗಾಯ

ಬೆಳಗಾವಿ: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಮಬ್ಬು ಕವಿದು, ದಾರಿ ಸರಿ ಕಾಣದೆ ಬಸ್​ ಪಲ್ಟಿಯಾದ ಪ್ರಕರಣ ನಡೆದಿದೆ.

ಬೆಳಗಾವಿಯ ಬಡಕೊಳ್ಳಿ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಬೆಳಗಾವಿಯಿಂದ ಹಿರೇಕೆರೂರಗೆ ಹೋಗುತ್ತಿದ್ದ ಸರ್ಕಾರಿ ಬಸ್ ಅಪಘಾತ ಕ್ಕೀಡಾಗಿದೆ.

ಜಿಲ್ಲೆಯಾದ್ಯಂತ ಮಳೆ ಅಬ್ಬರಿಸುತ್ತಿದ್ದು, ಭಾರಿ ಮಳೆಯಿಂದಾಗಿ ಬಸ್​ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಪಲ್ಟಿ ಯಾಗಿದೆ. ಬಸ್​ನಲ್ಲಿ 35 ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಬಸ್​ನಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳು ಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿ ಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.