Saturday, 14th December 2024

MLA S R Srinivas: ಉತ್ತಮ ಸಮಾಜ ನಿರ್ಮಾಣ ಶಿಕ್ಷಕರಿಂದ ಸಾಧ್ಯ

ಗುಬ್ಬಿ: ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣ ಶಿಕ್ಷಕರಿಂದ ಸಾಧ್ಯವಾಗುತ್ತದೆ ಎಂದು ಕೆ ಎಸ್ ಆರ್ ಟಿ ಸಿ ನಿಗಮ ಮಂಡಳಿ ಅಧ್ಯಕ್ಷ ಶಾಸಕ ಎಸ್ಆರ್ ಶ್ರೀನಿವಾಸ್ ತಿಳಿಸಿದರು.

ಹೇರೂರಿನ ಬಾಲಾಜಿ ಕಲ್ಯಾಣ ಮಂಟಪದಲ್ಲಿ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ 137ನೇ ಜಯಂತ್ಯೋ ತ್ಸವದ ಅಂಗವಾಗಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಅವರು ಸರ್ಕಾರದ ವತಿಯಿಂದ ಶಿಕ್ಷಕರಿಗೆ ನೀಡಬೇಕಾದ ಎಲ್ಲ ಸವಲತ್ತುಗಳನ್ನು ನೀಡಲಾಗುತ್ತಿದೆ. ಶಿಕ್ಷಕರು ಸಹ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.  

 ಪ್ರಧಾನ ಭಾಷಣಕಾರ ಹಿರೇಮಗಳೂರು ಕಣ್ಣನ್ ಮಾತನಾಡಿ ಶಿಕ್ಷಕರಿಗೆ ಅತಿ ದೊಡ್ಡ ಸ್ಥಾನವನ್ನು ಕಲ್ಪಿಸಿದ ಕೀರ್ತಿ ರಾಧಾಕೃಷ್ಣನ್ ರವರಿಗೆ ಸಲ್ಲುತ್ತದೆ. ಶೈಕ್ಷಣಿಕವಾಗಿ ಮುಂದುವರೆದರೆ ಸುಸಂಸ್ಕೃತ ಸಮಾಜ ನಿರ್ಮಾಣವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬಿಇಓ ನಟರಾಜು, ಕಾರ್ಯನಿರ್ವಹಣಾಧಿಕಾರಿ ಶಿವಪ್ರಕಾಶ್, ಕ್ಷೇತ್ರ ಸಮನ್ವಯಾಧಿಕಾರಿ ಮಧು ಸೂದನ್, ಅಕ್ಷರ ದಾಸೋಹ ಜಗದೀಶ್, ಪಟ್ಟಣ ಪಂಚಾಯಿತಿ ಸದಸ್ಯರಾದ ಶಿವಕುಮಾರ್, ಕೃಷ್ಣಮೂರ್ತಿ, ಶಶಿಕುಮಾರ್, ಶಿಕ್ಷಕರ ಸಂಘದ ಯೋಗಾನಂದ, ರವೀಶ್, ಶಿವಣ್ಣ, ಪ್ರಕಾಶ್ ದಯಾನಂದ್, ಚಿದಂಬರ, ಕರಿಬಸವಯ್ಯ ಸೇರಿದಂತೆ ಶಿಕ್ಷಕರು ಹಾಜರಿದ್ದರು.