Saturday, 27th July 2024

ಕಾನೂನಿನಲ್ಲಿಯೂ ಅತಿಥಿ ಉಪನ್ಯಾಸಕರ ಖಾಯಮಾತಿಗೆ ಅವಕಾಶವಿಲ್ಲ: ಡಾ.ಅಶ್ವಥ ನಾರಾಯಣ

ಬೀದರ: ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿಕೊಳ್ಳಲು ಕಾನೂನಿನಲ್ಲಿಯೂ ಅವಕಾಶ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ ನಾರಾಯಣ ಸಿ.ಎಸ್ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಭಾನುವಾರ ಮಾತನಾಡಿ,  ಅತಿಥಿ ಉಪನ್ಯಾಸಕರ ಖಾಯಂ ಕುರಿತು ಸುಳ್ಳು ಆಶ್ವಾಸನೆ ನೀಡುವು ದಿಲ್ಲ. ಅವರ ಸೇವೆಯನ್ನು ಪ್ರತಿ ವರ್ಷದಂತೆ ಮುಂದುವರೆಸಿಕೊಳ್ಳಲಾಗುತ್ತದೆ. ರಾಜ್ಯದಲ್ಲಿ ವಿದ್ಯಾರ್ಥಿಗಳ ಅನುಪಾತದಲ್ಲಿ ಉಪನ್ಯಾಸಕರ ನೇಮಕಾತಿ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಆದ್ಯತೆ ನೀಡ ಲಾಗುತ್ತಿದೆ. ಇನ್ನೂ ಅತಿಥಿ ಉಪನ್ಯಾಸಕರ ಸಂಭಾವನೆ ಹೆಚ್ಚಿಸುವ ಕುರಿತಂತೆ ಸಿಎಂ ಜತೆ ಈಗಾಗಲೇ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು.

ಅರ್ಹತೆವುಳ್ಳ ಎಲ್ಲರಿಗೂ ಪರೀಕ್ಷೆ ಬರೆಯಲು ಅವಕಾಶ ಇದೆ. ಮೆರಿಟ್ ಮತ್ತು ಮೀಸಲಾತಿ ಅನ್ವಯ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.

ಎಲ್ಲ ರೀತಿಯ ಶಿಕ್ಷಣವನ್ನು ಒಳಗೊಂಡು(ಕಾನೂನು ಶಿಕ್ಷಣ ಹಾಗೂ ವೈದ್ಯಕೀಯ ಶಿಕ್ಷಣ ಹೊರತುಪಡಿಸಿ) ರಾಷ್ಟ್ರಿಯ ಶಿಕ್ಷಣ ನೀತಿ-2020ನ್ನು ಜಾರಿಗೊಳಿಸಲಾಗುತ್ತಿದೆ.

ರಾಜ್ಯ ಸರ್ಕಾರವನ್ನು ಆರ್‌ಎಸ್‌ಎಸ್ ನಡೆಸುತ್ತದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ಸರಿಯಲ್ಲ. ಸರ್ಕಾರದ ಆಡಳಿತ, ಪಾರದರ್ಶಕತೆ ವಿಷಯದ ಬಗ್ಗೆ ಅವರು ಮಾತನಾಡಲಿ. ಬಿಎಸ್‌ವೈ ನಮ್ಮ ಅಗ್ರಮಾನ್ಯ ನಾಯಕರು. ಅವರ ಬಗ್ಗೆ ಪ್ರತಿಯೊಬ್ಬ ರಿಗೂ ಗೌರವ, ಅಭಿಮಾನ ಇದೆ. ಅವರನ್ನು ಸೈಡ್‌ಲೈನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

 

Leave a Reply

Your email address will not be published. Required fields are marked *

error: Content is protected !!