ಬೆಂಗಳೂರು: ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ಗೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ದಲ್ಲಿ ರಾಜ್ಯಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಗೃಹ ಇಲಾಖೆಯಿಂದ 7 ಅಧಿಕಾರಿ ಗಳನ್ನು ಅಮಾನತು ಮಾಡಲಾಗಿದೆ.
ದರ್ಶನ್ಗೆ ರಾಜ್ಯಾತಿಥ್ಯ ನೀಡಿರುವ ಸಂಬಂಧ ಫೋಟೋ ವೈರಲ್ ಆದ ಬೆನ್ನಲ್ಲೇ ಎಲ್ಲೆಡೆ ಪೊಲೀಸ್ ಇಲಾಖೆ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈ ಘಟನೆ ಸಂಬಂಧ 7 ಅಧಿಕಾರಿಗಳನ್ನು ಅಮಾನತು ಮಾಡಿದ್ದೇವೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದರು.
ನನಗೆ ನಿನ್ನ ಸುದ್ದಿ ಬಂತು. ಆಗ ಫೋಟೋ ವೈರಲ್ ಆಗ್ತಿತ್ತು. ತಕ್ಷಣ ಡಿಜಿಯವರ ಜೊತೆ ಮಾತನಾಡಿದೆ ಮತ್ತು ಅಧಿಕಾರಿಗಳನ್ನು ಅಲ್ಲಿಗೆ ಕಳಿಸಿಕೊಟ್ಟಿ ದ್ದೆವು. ಸದ್ಯ ಈ ಪ್ರಕರಣದಲ್ಲಿ ಏಳು ಜನ ಅಧಿಕಾರಿಗಳನ್ನು ಸಸ್ಪೆಂಟ್ ಮಾಡಿದ್ದೇವೆ. ಶರವಣ, ಶರಣಬಸವ, ಪ್ರಭು ಎಸ್, ಎಲ್.ಎಸ್.ತಿಪ್ಪೇಸ್ವಾಮಿ, ಶ್ರೀಕಾಂತ್ ತಳವಾರ್, ಹೆಡ್ ವಾರ್ಡರ್ಸ್ ವೆಂಕಪ್ಪ, ಸಂತೋಷ್ ಕುಮಾರ್ ನರಸಪ್ಪ ಅವರನ್ನು ಅಮಾನತು ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.
ಈ ಘಟನೆಯ ಬಗ್ಗೆ ವರದಿ ಕೇಳಿದ್ದೇನೆ. ಡಿಜಿಯವರು ಅಲ್ಲಿಗೆ ಭೇಟಿ ಕೊಟ್ಟಿದ್ದಾರೆ. ಇಂತಹ ಘಟನೆ ನಡೆಯಬಾರದು. ಯಾರು ಅವಕಾಶ ಕೊಟ್ಟಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಹಿರಿಯ ಅಧಿಕಾರಿಗಳನ್ನು ಅಲ್ಲಿಂದ ಸ್ಥಳಾಂತರ ಮಾಡುತ್ತೇವೆ. ಆ ಜಾಗಕ್ಕೆ ಬೇರೆ ಹಿರಿಯ ಅಧಿಕಾರಿಗಳನ್ನು ಹಾಕುತ್ತೇವೆ. ಆಂತರಿಕ ವರದಿ ಬಂದ ಮೇಲೆ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ.
ಒಂದು ಕೈಯಲ್ಲಿ ಕಾಫಿ ಕಪ್ ಹಾಗೂ ಇನ್ನೊಂದು ಕೈಯಲ್ಲಿ ಸಿಗರೇಟ್ ಹಿಡಿದುಕೊಂಡು, ಕುರ್ಚಿಯ ಮೇಲೆ ಆರಾಮಾಗಿ ಕುಳಿತು ರೌಡಿ ವಿಲ್ಸನ್ ಗಾರ್ಡನ್ ಜತೆ ದರ್ಶನ್ ಮಾತನಾಡುತ್ತಿರುವ ದೃಶ್ಯ ವೈರಲ್ ಆಗಿರುವ ಫೋಟೋದಲ್ಲಿದೆ. ಇದರ ಬೆನ್ನಲ್ಲೇ ದರ್ಶನ್, ರೌಡಿಶೀಟರ್ ಮಗನ ಜತೆ ಜೈಲಿನಿಂದಲೇ ದರ್ಶನ್ ವಿಡಿಯೋ ಕಾಲ್ ಮೂಲಕ ಮಾತನಾಡಿರುವ ವಿಡಿಯೋ ಸಹ ಲೀಕ್ ಆಗಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ. ದರ್ಶನ್ ಜೈಲು ಸೇರಿ ಎರಡು ತಿಂಗಳಿಗೂ ಹೆಚ್ಚು ಸಮಯ ಆಗಿದೆ. ಆಗಿನಿಂದಲೂ ಜೈಲಿನಲ್ಲಿ ದರ್ಶನ್ಗೆ ಎಲ್ಲವೂ ಆರಾಮಾಗಿ ಸಿಗುತ್ತಿದೆ ಎಂಬ ಆರೋಪ ಕೇಳಿಬರುತ್ತಿತ್ತು.
ವೇಲು ಎಂಬ ಕೈದಿ ಈ ಫೋಟೋವನ್ನು ಜೈಲಿನಿಂದ ತೆಗೆದು, ತನ್ನ ಪತ್ನಿಗೆ ಕಳುಹಿಸಿದ್ದ. ಆ ಬಳಿಕ ವೈರಲ್ ಆಗಿದೆ ಎಂದು ಮಾಧ್ಯಮ ತಿಳಿಸಿದೆ.