Tuesday, 10th September 2024

ಪ್ಲಾಸ್ಟಿಕ್ ಗಮ್ ಟೇಪ್ ತಯಾರಿಕಾ ಕಾರ್ಖಾನೆಗೆ ಬೆಂಕಿ

ಬೆಂಗಳೂರು : ಆನೇಕಲ್ ಬಳಿ ಇರುವ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ಗಮ್ ಟೇಪ್ ತಯಾರಿಕಾ ಕಾರ್ಖಾನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಕಚ್ಚಾ ವಸ್ತುಗಳು ಸುಟ್ಟು ಕರಕಲಾಗಿವೆ.

ಬೆಂಗಳೂರು ಹೊರವಲಯದ ಆನೇಕಲ್ ಬಳಿ ಇರುವ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಟೆಕ್ನೆವಾ ಟೇಪ್ಸ್ ಪ್ರೈ. ಲಿ. ಎಂಬ ಕಾರ್ಖಾನೆಯಲ್ಲಿ ಈ ಒಂದು ಅಗ್ನಿ ಅನಾಹುತ ಸಂಭವಿಸಿದೆ. ಭಾರಿ ಬೆಂಕಿ ಹಿನ್ನೆಲೆಯಲ್ಲಿ ಸಮೀಪದ ಕಾರ್ಖಾನೆಗಳ ಸಿಬ್ಬಂದಿಯೂ ಆತಂಕಗೊಂಡರು. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ದೌಡಾಯಿಸಿದ್ದು, ಹೆಚ್ಚಿನ ಅನಾಹುತ ತಡೆಯುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.

ಗಮ್​​ ಟೇಪ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಸುಲಭವಾಗಿ ಹೊತ್ತಿಕೊಳ್ಳುವ ರಾಸಾಯನಿಕ ಇರುವುದು ಬೆಂಕಿಯ ತೀವ್ರತೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿಗೆ ಇಡೀ ಕಾರ್ಖಾನೆ ಆಹುತಿಯಾಗಿದ್ದು, ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿತ್ತು. ಹತ್ತಿರದ ಎಲೆಕ್ಟ್ರಾನಿಕ್ ಸಿಟಿ ಹಾಗೂ ಆನೇಕಲ್ ಭಾಗದ ಅಗ್ನಿಶಾಮಕ ದಳದ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಹರಸಾಹಸಪಟ್ಟರು.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು ಹೊರಗೆ ಬಂದಿದ್ದರಿಂದ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *