Thursday, 21st November 2024

ಗುಂಡ್ಲುಪೇಟೆ: ಚಿಕನ್ ಊಟ ಸೇವಿಸಿದ ಮಕ್ಕಳು ಅಸ್ವಸ್ಥ

ಚಾಮರಾಜನಗರ: ಚಿಕನ್ ಊಟ ಸೇವಿಸಿದ್ದ ಮಕ್ಕಳಿಗೆ ವಾಂತಿ-ಬೇಧಿಯಾಗಿ ಅಸ್ವಸ್ಥ ಗೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.

ಒಟ್ಟು 30 ವಿದ್ಯಾರ್ಥಿಗಳಿಗೆ ವಾಂತಿ-ಬೇಧಿಯಾಗಿದ್ದು, ಈ ಪೈಕಿ ತೀವ್ರ ಅಸ್ವಸ್ಥಗೊಂಡಿದ್ದ 15 ಮಂದಿಗೆ ಬೇಗೂರು ಆಸ್ಪತ್ರೆಯಲ್ಲಿ ಡ್ರಿಪ್ ಹಾಕಿ ಚಿಕಿತ್ಸೆ ಕೊಡಲಾಗುತ್ತಿದೆ.

ಭಾನುವಾರ ರಾತ್ರಿ ಚಿಕನ್ ಊಟ ಮಾಡಲಾಗಿತ್ತು. ತಿಂದ ಬಳಿಕ ವಾಂತಿ-ಬೇಧಿ ಶುರುವಾಗಿ ವಿದ್ಯಾರ್ಥಿಗಳು ಅಸ್ವಸ್ಥ ಗೊಂಡಿ ದ್ದಾರೆ.

ಇತ್ತೀಚೆಗಷ್ಟೇ ಊಟದಲ್ಲಿ ಹಲ್ಲಿ ಬಿದ್ದು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ರಾಯ ಚೂರು ತಾಲೂಕಿನ ಅಪ್ಪನದೊಡ್ಡಿ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ನಡೆದಿತ್ತು.

ಶಾಲೆಯಲ್ಲಿ ಮಕ್ಕಳಿಗಾಗಿ ಮಧ್ಯಾಹ್ನ ಬಿಸಿಯೂಟಕ್ಕೆ ಉಪ್ಪಿಟ್ಟು ಮಾಡಿದ್ದರು. ಅದನ್ನು ಎಲ್ಲ ಮಕ್ಕಳಿಗೆ ಬಡಿಸಲಾಗಿದ್ದು, ಈ ವೇಳೆ ಪಾತ್ರೆಯ ಅಡಿಯಲ್ಲಿ ಸತ್ತ ಹಲ್ಲಿಯೊಂದು ಪತ್ತೆಯಾಗಿದೆ. ಅಷ್ಟರಲ್ಲಾಗಲೇ ಉಪ್ಪಿಟ್ಟು ತಿಂದ ಹಲವು ಮಕ್ಕಳಿಗೆ ಹೊಟ್ಟೆ ತೊಳೆಸಲು ಆರಂಭವಾಯಿತು. ಬಳಿಕ ಕೆಲವು ಮಕ್ಕಳು ವಾಂತಿ ಮಾಡಲು ಶುರು ಮಾಡಿದರು. ಈ ಪೈಕಿ ಮೂರು ಮಕ್ಕಳು ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ಯಾಪಲದಿನ್ನಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.