Friday, 13th December 2024

ವಿಕಸಿತ ಭಾರತ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಅತ್ಯವಶ್ಯಕ: ಗುಂತ ಲಕ್ಷ್ಮಣ್ 

ತುಮಕೂರು: ವಿಕಸಿತ ಭಾರತವಾಗಿ ದೇಶವನ್ನು ನಿರ್ಮಾಣ ಮಾಡಲು  ಯುವಕರನ್ನು ಒಟ್ಟುಗೂಡಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ಅಖಿಲ ಭಾರತೀಯ ರಾಷ್ಟ್ರೀಯ ಶಿಕ್ಷಕರ ಮಹಾಸಂಘದ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಗುಂತ ಲಕ್ಷ್ಮಣ್ ಕರೆ ನೀಡಿದರು.
ನಗರದ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಖಿಲ ಭಾರತೀಯ ರಾಷ್ಟ್ರೀಯ ಶಿಕ್ಷಕರ ಮಹಾಸಂಘ, ಶೇಷಾದ್ರಿಪುರಂ ಕಾಲೇಜಿನ ವಿವೇಕಾನಂದ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ  ಆಯೋಜಿಸಿದ್ದ 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಶಿಕ್ಷಕರ ಪಾತ್ರದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಭಿವೃದ್ಧಿ ಎಂದರೆ ಕೇವಲ ರಸ್ತೆ, ಕಟ್ಟಡಗಳು, ಕಾರ್ಖಾನೆಗಳು ಮಾತ್ರವಲ್ಲ. ದೇಶದ ಪ್ರತಿಯೊಬ್ಬ ಪ್ರಜೆಗೂ ಮೂಲಭೂತ ಸೌಕರ್ಯಗಳಾದ ಶಿಕ್ಷಣ, ಆರೋಗ್ಯ, ಆಹಾರ, ವಸತಿ ಸಿಗಬೇಕು. ವಿಜ್ಞಾನ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆ, ರಕ್ಷಣಾ ವ್ಯವಸ್ಥೆಯಲ್ಲಿ ಸದೃಢತೆ ಮತ್ತು ಅತಿ ಮುಖ್ಯವಾದ ಅಂಶವೆಂದರೆ ಸಾಮಾಜಿಕ ಸಮಾನತೆ  ಎಂದರು.
ಸರ್ವೋದಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸುಬ್ಬರಾವ್  ಮಾತನಾಡಿ, ಕಳೆದ ಕೆಲವು ದಶಕಗಳಲ್ಲಿ ದೇಶ ಒಳ್ಳೆಯ ಪ್ರಗತಿಯನ್ನು ಕಾಣುತ್ತಿದೆ ಎಂದರು.
ಈ ಕಾರ್ಯಕ್ರಮದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಇತಿಹಾಸ ಪ್ರಾಧ್ಯಾಪಕರಾದ ಪ್ರೊ. ಕೊಟ್ರೇಶ್, ಮಾಜಿ ಸಿಂಡಿಕೇಟ್ ಸದಸ್ಯರಾದ ಟಿ.ಎಸ್. ಸುನಿಲ್ ಪ್ರಸಾದ್, ಶೇಷಾದ್ರಿ ಪುರಂ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಜಗದೀಶ್, ಸಹಾಯಕ ಪ್ರಾಧ್ಯಾಪಕ ದೇವರಾಜಪ್ಪ, ಉಪಸ್ಥಿತ ರಿದ್ದರು.