Monday, 20th May 2024

ಹೆಚ್ ವಿಶ್ವನಾಥ್ ಪುತ್ರ ಕಾಂಗ್ರೆಸ್ ಸೇರ್ಪಡೆ ಶೀಘ್ರ

ಮೈಸೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರ ಪುತ್ರ, ಪೂರ್ವಜ್ ಇದೀಗ ಕಾಂಗ್ರೆಸ್ ಸೇರ್ಪಡೆಯಾಗುವು ದಾಗಿ ಘೋಷಿಸಿದ್ದಾರೆ.

ಜಿಲ್ಲೆಯ ನಂಜನಗೂಡು ತಾಲೂಕಿನ ತಗಡೂರಿನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಈ ಬಗ್ಗೆ ಮಾತನಾಡಿ ಅವರು, ತಾನು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆ ಆಗಲು ನಿರ್ಧರಿಸಿದ್ದೇನೆ. ಈ ಬಗ್ಗೆ ಸಿದ್ಧರಾಮಯ್ಯ ಅವರ ಗಮನಕ್ಕೂ ತಂದಿದ್ದೇನೆ. ಅವರು ಸಕಾರಾತ್ಮಕ ವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಸಿದ್ಧರಾಮಯ್ಯನವರು ಮುಂದೆ ಸಿಎಂ ಆಗುವ ಎಲ್ಲಾ ಲಕ್ಷಣಗಳಿವೆ. ಹೀಗಾಗಿ ಅವರ ಪಕ್ಷ ಬೆಂಬಲಿಸುವ ನಿಟ್ಟಿನಲ್ಲಿ ಶೀಘ್ರವೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.

error: Content is protected !!