ಗುಬ್ಬಿ : ದಿನಾಂಕ 29.12.2023ನೇ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ರೈತರೊಂದಿಗೆ ನಾವು ಎಂಬ ವಿಶೇಷ ಕಾರ್ಯಕ್ರಮವನ್ನು ಮುರಳಿಧರ ಹಾಲಪ್ಪ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದೆ ಎಂದು ಸಮಾಜ ಸೇವಕ ಶಂಕರಾನಂದ ತಿಳಿಸಿದರು.
ಜನಪ್ರಿಯ ಶಾಸಕ ಎಸ್ ಆರ್ ಶ್ರೀನಿವಾಸ್ ರವರ ನೇತೃತ್ವದಲ್ಲಿ ತಾಲೂಕಿನ ಸಮಸ್ತ ಇಲಾಖೆಗಳ ಅಧಿಕಾರಿಗಳೊಂದಿಗೆ ಇಂದಿನ ಸರ್ಕಾರ ಜಾರಿ ಗೊಳಿಸಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ರೈತರು ತಮ್ಮ ಕುಂದು ಕೊರತೆಗಳು ಹಾಗೂ ಅಹವಾಲುಗಳನ್ನು ನೇರವಾಗಿ ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸೂಕ್ತ ವೇದಿಕೆಯಾಗಿದ್ದು. ನಿಟ್ಟೂರು ಭಾಗದ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ರೈತರು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರುಗಳು ನಿಟ್ಟೂರು ಸಂತೆಬೀದಿಯಲ್ಲಿ ಪಕ್ಷಾತೀತವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.