Sunday, 27th October 2024

ನ್ಯೂಸ್ ಫಸ್ಟ್ ವಾಹಿನಿಯ ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ತುಮಕೂರು: ಹಾವೇರಿಯಲ್ಲಿ ನ್ಯೂಸ್ ಫಸ್ಟ್ ವಾಹಿನಿಯ ಪತ್ರಕರ್ತರ ಮೇಲೆ ನಡೆದಿರುವ ಹಲ್ಲೆ ಖಂಡಿಸಿ ಹಾಗೂ ಹಲ್ಲೆ ನಡೆಸಿ ದವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ಕಾರ‍್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ತುಮಕೂರು ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ವಾಹಿನಿಯ ವರದಿಗಾರರಾದ ವೀರಯ್ಯ ಹಿರೇಮಠ, ಶಿವು ಮಡಿವಾಳರ್ ಹಾಗೂ ಕ್ಯಾಮೆರಾಮೆನ್ ಪ್ರಕಾಶ್ ಮುಳ್ಳಳ್ಳಿ ಅವರ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ರಾಜ್ಯದಲ್ಲಿ ಪತ್ರರ‍್ತರ ಮೇಲೆ ಹಲ್ಲೆಗಳು ನಡೆಯುತ್ತಲೇ ಇವೆ, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರಕಾರ ಸೂಕ್ತ ಕಾನೂನು ಜಾರಿಗೆ ತರಬೇಕು. ಪದೇ ಪದೇ ಪತ್ರರ‍್ತರ ಮೇಲೆ ಹಲ್ಲೆಗಳು ನಡೆಯುತ್ತಲೇ ಇವೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಪತ್ರರ‍್ತರಿಗೆ ಸೂಕ್ತ ರಕ್ಷಣೆ ನೀಡಬೇಕು, ಸಮಾಜದ ನಾಲ್ಕನೇ ಅಂಗ ಎಂದು ಹೇಳುತ್ತಾರೆಯೇ ವಿನಃ ಸೂಕ್ತ ರಕ್ಷಣೆ ನೀಡಿ, ಹಾವೇರಿ ಜಿಲ್ಲೆಯಲ್ಲಿ ಪತ್ರರ‍್ತರ ಮೇಲೆ ಹಲ್ಲೆ ನಡೆಸಿರುವವರನ್ನು ಗಡಿಪಾರು ಮಾಡಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪತ್ರಕರ್ತರು ಒತ್ತಾಯಿಸಿದರು.

ಮಾಜಿ ಸಚಿವ ಹಾಗೂ ಕರ್ನಾಟಕ ಕಾರ‍್ಯನಿರತ ಪತ್ರರ‍್ತರ ಸಂಘದ ಮಾಜಿ ಅಧ್ಯಕ್ಷರಾದ ಎಸ್.ಶಿವಣ್ಣ ಮಾತನಾಡಿ, ಈ ಸಂಬಂಧ ಮುಖ್ಯಮಂತ್ರಿಗಳ ಬಳಿ ರ‍್ಚೆ ನಡೆಸಿ ಹಲ್ಲೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿ ಸುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ತಾಲ್ಲೂಕು ಕಸಾಪ ನಿಕಟಪರ‍್ವ ಅಧ್ಯಕ್ಷೆ ಬಿ.ಸಿ.ಶೈಲಾನಾಗರಾಜ್, ಪತ್ರರ‍್ತರಾದ ಪುರುಷೋತ್ತಮ್, ಮಧು ಇಂಗಳದಾಳ್ ಮಾತನಾಡಿದರು. ಪ್ರತಿಭಟನೆ ನಂತರ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅವರ ಮುಖಾಂತರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಕರ್ನಾಟಕ ಕರ‍್ಯನಿರತ ಪತ್ರರ‍್ತರ ಸಂಘ, ಪ್ರೆಸ್ ಕ್ಲಬ್ ತುಮಕೂರು ಪದಾಧಿಕಾರಿಗಳು ಭಾಗವಹಿಸಿದ್ದರು.