Wednesday, 11th December 2024

ಅಂಜನಾದ್ರಿಯೆ ಹನುಮನ ಜನ್ಮಭೂಮಿ

– ಅಂಜನಾದ್ರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ
– ಅಂಜನಾದ್ರಿ ಅಭಿವೃದ್ಧಿಗೆ ಸರ್ಕಾರ ಬದ್ಧ

ಕೊಪ್ಪಳ: ನಮ್ಮೆಲ್ಲರ ಆರಾದ್ಯ ದೈವ ಅಂಜನಾದ್ರಿಯ ಹನುಮಂತನ ದರ್ಶನಕ್ಕೆ ಆಗಮಿಸಿದ್ದೇವೆ. ಅಂಜನಾದ್ರಿಯ ಸಮಗ್ರ ಅಭಿವೃದ್ಧಿಗೆ ಈಗಾಗಲೆ ಬಜೆಟ್ ನಲ್ಲಿ 100 ಕೋಟಿ ರೂಪಾಯಿ ಅನುದಾನ‌ ಘೋಷಣೆ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅಂಜನಾದ್ರಿಗೆ ಪ್ರತಿವರ್ಷವೂ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಆಗಮಿ ಸುವ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸುವುದು ನಮ್ಮ‌ಕರ್ತವ್ಯ. ಬರುವ ದಿನಗಳಲ್ಲಿ ಉಅತ್ರಿಗಳು ಆಗಮಿಸುವ ಸಂಖ್ಯೆ ಹೆಚ್ಚಳವಾಗಲಿದೆ. ಹೀಗಾಗಿ ಅಂಜನಾದ್ರಿ ಬೆಟ್ಟದ ಮೇಲೂ ಮತ್ತು ಕೆಳಗೂ ಅಭಿವೃದ್ಧಿ ಆಗಬೇಕಾದ ಅಗತ್ಯವಿದೆ. ಈಗಾಗಲೇ ಸರ್ಕಾರದ ಆದೇಶದೊಂದಿಗೆ ಅಂಜನಾದ್ರಿಗೆ ಬಂದಿ ದ್ದೇನೆ.

ಅಂಜನಾದ್ರಿಗೆ ಎಲ್ಲ ರೀತಿಯ ಸೌಕರ್ಯಗಳನ್ನು ಕಲ್ಪಿಸುವ ದೊಡ್ಡ ಗುರಿ ನಮ್ಮದಾಗಿದೆ. ಇಲ್ಲಿ ಯಾತ್ರಿಕರಿಗೆ ಆಸ್ಪತ್ರೆ, ಮಾರುಕಟ್ಟೆBasavaraj Bommai ವ್ಯವಸ್ಥೆ ಕಲ್ಪಿಸುವುದು ನಮ್ಮ ಚಿಂತನೆಯಾಗಿದೆ. ಬೆಟ್ಟಕ್ಕೆ ರೂಪ್ ವೆ ವ್ಯವಸ್ಥೆ ಮಾಡಿ ವಯಸ್ಸಾದವರಿವೂ ಸಹ ಹನುಮಂತನ ದೇರ್ಶನ ಕಲ್ಪಿಸುವ ಚಿಂತನೆ ಇದೆ.

ಬಜೆಟ್ ನಲ್ಲಿ ಜಿಲ್ಲೆಗೆ ನೀಡಿದ ಅನುದಾನದ ಕಾಮಗಾರಿಗಳಿಗೆ ಚಾಲನೆ ಕೊಡಲು ಬಂದಿದ್ದೇನೆ. ಹಾಗೂ ರೂಪ್ ವೆ ಗೆ ಮುಂದಿನ ಮುಂದಿನ ದಿನಗಳಲ್ಲಿ ಟೆಂಡರ್ ಕರೆಯಲಯ ಸೂಚನೆ‌ನೀಡಿದ್ದೇನೆ. ಅಂಜನಾದ್ರಿಯ ಅಭಿವೃದ್ಧಿಗೆ ಈಗಾಗಲೆ ಮಾಸ್ಟರ್ ಪ್ಲಾನ್ ರೂಪಿಸಿದ್ದೇವೆ. ಅಂಜನಾದ್ರಿಯ ಜೊತೆಗೆ ಸುತ್ತಲಿನ ಪ್ರದೇಶ ಗಳನ್ನು ಅಭಿವೃದ್ಧಿ ಮಾಡಲಾಗುವುದು. ಬಜೆಟ್ ನಲ್ಲಿ ಘೋಷಿಸಿ ದಂತೆ ಅಂತಾರಾಷ್ಟ್ರೀಯ ಮಟ್ಟದ ಹಂಪಿ ಟೂರಿಸಂ ಸರ್ಕಿಟ್ ನ್ನು ಮಾಡಲು ಯೋಜಿಸಲಾಗಿದೆ. ಹಂಪಿ ಮತ್ತು ಮೈಸೂರನ್ನು ಪ್ರವಾಸೋದ್ಯಮ ದೃಷ್ಟಿಯಿಂದ ಅಂತಾರಾಷ್ಟ್ರೀಯ ಸರ್ಕಿಟ್ ಮಾಡಲು ಚಿಂತಿಸಿದ ಕಾರಣ ಯೋಜನೆ ರೂಪಿಸಲಾಗಿದೆ.

ಪುರಾತತ್ವ ಇಲಾಖೆ ವ್ಯಪ್ತಿಯ ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಲ್ಲವುಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಇದರ ಜೊತೆಗೆ ಅಂತಾರಾಷ್ಟ್ರೀಯ ಪ್ರವಾಸಿಗರಿಗೂ ವ್ಯವಸ್ಥೆ ಕಲ್ಪಿಸಲಾಗುವುದು. ಈ ಭಾಗದ ಐತಿಹಾಸಿಕ ಪ್ರವಾಸಿತಾಣಗಳ ಅಭಿವೃದ್ಧಿಗೆ ಒತ್ತುಕೊಡಲಿದ್ದೇವೆ.

ಹನುಮನ ಜನ್ಮಿಸಿದ್ದು ಅಂಜನಾದ್ರಿಯಲ್ಲಿಯೇ ಎಂದು ನಾನು ಸಾವಿರ ಸಲ ಹೇಳಯ ತ್ತೇನೆ. ಸಾವಿರಾರು ವರ್ಷಗಳಿಂದ ಇರುವ ಕಿಷ್ಕಿಂದ ಪುರಾವೆಗಳೆ ಹನುಮ ಹುಟ್ಟಿದ್ದು ಇಲ್ಲೇ ಎಂದು ಸಾರಿ ಸಾರಿ ಹೇಳುತ್ತವೆ. ಇದನ್ನು ಬಿಟ್ಟು ಹೇಳಲು ಬೇರೆ ಪುರಾವೆಗಳು ಬೇಕಿಲ್ಲ. ಇತ್ತೀಚಿನ ದಿನಗಳಲ್ಲಿ ಆಂಜನೇಯ ಅಲ್ಲಿ ಜನಿಸಿದ್ದ ಇಲ್ಲಿ ಜನಸಿದ್ದ ಎಂಬ ವಿವಾದಗಳು ಕೇಳಿಬರುತ್ತಿವೆ.

ಅಂಜನಾದ್ರಿಯೇ ಹನುಮಂತನು ಜನಸಿದ ಪ್ರದೇಶಚಾಗಿದೆ ಎಂದು ಹೇಳುವುದುಕ್ಕೆ ಎರಡು ಮಾತಿಲ್ಲ. ಹಾಗಾಗಿ ಈ ಅಂಜನಾದ್ರಿ ಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಮಾಡಲು ನಾವು ಬಜೆಟ್ ನಲ್ಲಿ ಅನುದಾನ ಮೀಸಲಿಟ್ಟಿದ್ದೇವೆ.

ಹನುಮ ಜನ್ಮಭೂಮಿ ಅಂಜನಾದ್ರಿಯ ಎನ್ನುವ ನಮ್ಮ ನಂಬಿಕೆಯೆ ಘೋಷಣೆಯಾಗಿದೆ. ಕರ್ನಾಟಕ, ಅಂಧ್ರ ಅಥವಾ ಬೇರೆ ರಾಜ್ಯ ಎಂಬ ಮಾತೇ ಇಲ್ಲಿ. ಇಡೀ ಭಾರತಕ್ಕೆ ಗೊತ್ತಿದೆ ಅಂಜನಾದ್ರಿಯೆ ಹನುಮನ ಜನ್ಮಸ್ಥಳ ಎಂದು. ಇದನ್ನು ಸಾವಿರ ಬಾರಿ ಸಾರಿ ಸಾರಿ ಹೇಳುತ್ತೇನೆ. ಅಂಜನಾದ್ರಿಯ ಅಭಿವೃದ್ಧಿಗೆ ಬೇಕಾದ ಜಮೀನು ಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಈಗಾಗಲೆ ಒಂದು ಸಭೆ ಮಾಡಿರುವೆ.

ಬಿಜೆಪಿ ಸರ್ಕಾರದ ಆಡಳಿತ ವೈಖರಿ ಕುರಿತು ಟ್ವೀಟ್ ಮಾಡಿರುವ ಚಕ್ರವರ್ತಿ ಸೂಲಿಬೆಲೆ ನಮ್ಮ ಆತ್ಮೀಯರು. ಹಿಂದೂತ್ವದ ಪರ ಇರುವಂತವರು. ಹಿಂದೂಗಳ ಕೊಲೆಯಾದಾಗ ಸಹಜವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ನಮ್ಮವರಾಗಿದ್ದು ಅವರೊಂದಿಗೆ ಮಾತನಾಡಿ ತನಿಖೆಯ ಪ್ರಗತಿ ತಿಳಿಸುತ್ತೇನೆ.