Friday, 13th December 2024

ಸಮಾಜ ಸೇವಕ ಆಸೀಫ್​ ನೀಚ ಕೃತ್ಯ ಬೆಳಕಿಗೆ…!

ಉಡುಪಿ: ಜಿಲ್ಲೆಯ ಸಮಾಜ ಸೇವಕ, ಆಪತ್ಭಾಂದವ ಎಂದೇ ಖ್ಯಾತ ಆಸೀಫ್​ನ ನೀಚ ಕೃತ್ಯ ಬಟಾಬಯಲಾಗಿದೆ. ಸ್ವಂತ ಪುತ್ರಿಯ ವಿಡಿಯೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್ ಮಾಡಿದ್ದಾನೆ.

ಪಡುಬಿದ್ರಿಯಲ್ಲಿ ತನ್ನ ಸ್ವಂತ ಪುತ್ರಿಯ ಖಾಸಗಿ ವಿಡಿಯೋಗಳನ್ನೇ ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ವಾಟ್ಸಾಪ್ ಗ್ರೂಪ್​ಗಳಲ್ಲಿ ಹರಿಬಿಟ್ಟಿರುವ ಆರೋಪ ಕೇಳಿಬಂದಿದೆ. ಈ ಕುರಿತು ಪತಿ ವಿರುದ್ಧ ಪತ್ನಿಯೇ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣದ ಬೆನ್ನಲ್ಲೇ ಆರೋಪಿಯ ಮಗಳು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸೀಫ್​ನ ಪುತ್ರಿ ತೀರ್ಥಹಳ್ಳಿಯ ತಮ್ಮ ಸಂಬಂಧಿ ಆಗಿರುವ ಯುವಕನೋರ್ವನನ್ನು ಪ್ರೀತಿಸುತ್ತಿದ್ದಳು. ಇದು ಯುವತಿಯ ತಂದೆಗೆ ಇಷ್ಟವಿರಲಿಲ್ಲ. ಈ ಕೋಪದಿಂದ ಪುತ್ರಿಯ ಫೋಟೋ, ವಿಡಿಯೋಗಳನ್ನು ಸಂಬಂಧಿ ಹುಡುಗನ ಜೊತೆಗಿನ ಫೋಟೋ ಎಡಿಟ್ ಮಾಡಿ ವೈರಲ್ ಮಾಡಿದ್ದಾನೆ. ಅಲ್ಲದೇ ಮಗಳು ಪ್ರೀತಿಸುತ್ತಿದ್ದ ಹುಡಗನನ್ನು ಮನೆಗೆ ಕರೆಸಿ ಆತನ ಮೇಲೆ ಹಲ್ಲೆ ಮಾಡಿದ್ದನಂತೆ. ಬಳಿಕ ಆ ಹುಡುಗನ ಮತ್ತು ತನ್ನ ಮಗಳ ಫೋನ್​ಗಳನ್ನು ಕಸಿದುಕೊಂಡು ಅದರಲ್ಲಿದ್ದ ವಿಡಿಯೋಗಳನ್ನು ತನ್ನ ಫೋನ್​ಗೆ ವರ್ಗಾಯಿಸಿಕೊಂಡು ಅವುಗಳನ್ನು ಅಶ್ಲೀಲವಾಗಿ ಎಡಿಟ್​ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಿವಿಧ ವಾಟ್ಸಾಪ್ ಗ್ರೂಪ್​ಗಳಿಗೆ ಕಳುಹಿಸಿದ್ದಾನೆ ಎಂದು ಅರೋಪಿಸಲಾಗಿದೆ.