ಹಾಸನ: ಹಾಸನದ ಭುವನಹಳ್ಳಿ ವಿಮಾನ ನಿಲ್ದಾಣ ಕಾಮಗಾರಿ ಇದೇ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತ ನಾಡಿದ ಅವರು, ಮೂರು ವರ್ಷಗಳ ಹಿಂದೆ ಪ್ರಾರಂಭವಾದ 200 ಕೋಟಿ ರೂಪಾಯಿ ಗಳ ಯೋಜನೆಯಲ್ಲಿ ರನ್‌ವೇ ಸೇರಿದಂತೆ ಶೇ.70ರಷ್ಟು ಕಾಮಗಾರಿಗಳು ಪೂರ್ಣ ಗೊಂಡಿವೆ ಎಂದು ಹೇಳಿದರು.
ಇನ್ನು ಚಾಲ್ತಿಯಲ್ಲಿರುವ ಯೋಜನೆಗಳನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಮತ್ತು ಖಾತರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದು ಹೇಳಿದರು.
“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 27ರಂದು ಗೃಹಲಕ್ಷ್ಮಿ ಖಾತರಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಮತ್ತೊಂದೆಡೆ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ 5 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ”. ಅಲ್ಲದೆ ಸಾಮಾಜಿಕ ನ್ಯಾಯದ ಮೂಲಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಹಾಗೂ ದೀನದಲಿತರ ಉನ್ನತಿಗೆ ಸರ್ಕಾರ ಬದ್ಧವಾಗಿದ ಎಂದರು.
ಈ ವೇಳೇ ಜಿಲ್ಲಾಧಿಕಾರಿ ಸಿ.ಸತ್ಯಬಾಮಾ, ಜಿಲ್ಲಾ ಪಂಚಾಯತ್ ಸಿಇಒ ಪೂರ್ಣಿಮಾ, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.