Sunday, 15th December 2024

ಬೇಲೂರಿನಲ್ಲಿ ಎರಡು ’ಕೈ’ ನಾಯಕರ ಬೆಂಬಲಿಗರ ನಡುವೆ ಮಾರಾಮಾರಿ

ಹಾಸನ: ಜಿಲ್ಲೆಯ ಬೇಲೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಭೆ ನಡೆಸಿದ್ದು ಸಭೆಯಲ್ಲಿ ಎರಡು ನಾಯಕರ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ವರದಿಯಾಗಿದೆ.

ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಾಗಿ ಬೇಲೂರಿನಲ್ಲಿ ಶನಿವಾರ ಆಯೋಜಿಸಿದ ಕಾಂಗ್ರೆಸ್​ ಕಾರ್ಯ ಕರ್ತರ ಸಭೆಯಲ್ಲಿ ಎರಡು ಬಣಗಳ ನಡುವೆ ಮಾರಾಮಾರಿ ನಡೆದಿದೆ. ಇಬ್ಬರು ಕಾಂಗ್ರೆಸ್ ನಾಯಕರ ಬೆಂಬಲಿಗರು ಪರಸ್ಪರ ಕೈಮಿಲಾಯಿಸಿಕೊಂಡಿ ದ್ದಾರೆ ಎಂದು ತಿಳಿದುಬಂದಿದೆ.

ಮಾಜಿ ಸಚಿವ ಬಿ ಶಿವರಾಂ ಬೇಲೂರು ತಾಲ್ಲೂಕಿನ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯ ಕರ್ತರ ಸಭೆ ಕರೆದಿದ್ದರು. ಟಿಕೆಟ್ ಆಕಾಂಕ್ಷಿ ಜತ್ತೇನಹಳ್ಳಿ ರಾಮಚಂದ್ರ ಕೂಡ ಸಭೆಯಲ್ಲಿ ಭಾಗಿಯಾಗಿದ್ದರು. ಇದೇ ಸಭೆಗೆ ಸ್ಥಳೀಯ ಮುಖಂಡ ಹಾಗೂ ಕಳೆದ ವಿದಾನಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿ ಯಾಗಿದ್ದ ಗ್ರಾನೈಟ್ ರಾಜಶೇಖರ್ ಸಹ ಆಗಮಿಸಿದ್ದರು.

ರಾಜಶೇಖರ್ ಬಂದ ವೇಳೆ ಸಭೆಯಲ್ಲಿ ಬಿ ಶಿವರಾಂ ಮಾತನಾಡುತ್ತಿದ್ದರು. ನಮ್ಮ ಕಾರ್ಯಕರ್ತರು, ಮುಖಂಡರಲ್ಲಿ ಒಗ್ಗಟ್ಟು ಇಲ್ಲದಿರುವುದೇ ಬೇಲೂರಿ ನಲ್ಲಿ ಕಾಂಗ್ರೆಸ್ ಸೋಲಲು ಕಾರಣ ಎಂದು ಬಿ ಶಿವರಾಂ ಹೇಳಿದರು. ಇದರಿಂದ ಕೆರಳಿದ ರಾಜಶೇಖರ್ ಬೆಂಬಲಿಗಳು, ಶಿವರಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಬಿ ಶಿವರಾಂ ಹಾಗೂ ರಾಜಶೇಖರ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು.

ಉಭಯ ಬಣಗಳ ಕಾರ್ಯಕರ್ತರ ನಡುವಣ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಇಬ್ಬರು ನಾಯಕರ ಬೆಂಬಲಿಗರು ಕೈಕೈ ಮಿಲಾಯಿಸಿದರು. ಕುರ್ಚಿಗಳನ್ನು ಹಿಡಿದು ಹೊಡೆದಾಡಿಕೊಂಡರು.