Thursday, 21st November 2024

ಇಂದಿನಿಂದ ಮೂರು ದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ: ಇಂದಿನಿಂದ ಮೂರು ದಿನಗಳ ಕಾಲ ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕಳೆದ ಕೆಲ ತಿಂಗಳಿನಿಂದ ಸಮ್ಮೇಳನಕ್ಕೆ ಸಿದ್ಧತೆಗಳು ಭರದಿಂದ ನಡೆದಿದ್ದು, ಶುಕ್ರವಾರ ನುಡಿ ಜಾತ್ರೆಯ ತೇರಿಗೆ ಚಾಲನೆ ಸಿಗಲಿದೆ.

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸುಮಾರು 128 ಎಕರೆ ವಿಸ್ತೀರ್ಣದಲ್ಲಿ ವಿವಿಧ ವೇದಿಕೆಗಳನ್ನು ನಿರ್ಮಿಸ ಲಾಗಿದೆ. ಪ್ರಧಾನ ವೇದಿಕೆಯಲ್ಲಿ ಸುಮಾರು 30 ಸಾವಿರ ಜನರು ಕುಳಿತುಕೊಳ್ಳಲು ಆಸನ ಕಲ್ಪಿಸಲಾಗಿದೆ. ಇದರ ಜೊತೆಗೆ ಸಮನಾಂತರ ವೇದಿಕೆ ಗಳನ್ನು ನಿರ್ಮಿಸಲಾಗಿದ್ದು, ಅಲ್ಲಿಯೂ ಸಹ ಸಾವಿರಾರು ಜನರಿಗೆ ಕುಳಿತುಕೊಳ್ಳುವ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.

ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಪುಸ್ತಕ ಮತ್ತು ವಾಣಿಜ್ಯ ಬಳಕೆಗೆ ಸುಮಾರು 600 ಮಳಿಗೆಗಳನ್ನು ಸಿದ್ಧಪಡಿಸ ಲಾಗಿದೆ. ಪ್ರಮುಖವಾಗಿ ಮೂರು ಬೃಹತ್ ಮಳಿಗೆಗಳಲ್ಲಿ ಪ್ರದರ್ಶನ ಏರ್ಪಡಿಸಲಾಗಿದೆ. ಒಂದರಲ್ಲಿ ತೋಟಗಾರಿಕೆ ಇಲಾಖೆ ಫಲಪುಷ್ಪ ಪ್ರದರ್ಶನ, ಎರಡನೇಯದರಲ್ಲಿ ವಾರ್ತಾ ಇಲಾಖೆ ಪ್ರದರ್ಶನ ಮತ್ತು ಮೂರನೇಯ ಪ್ರದರ್ಶನವನ್ನು ಕಸಾಪ ಏರ್ಪಡಿಸಿತ್ತು. ಕಸಾಪ ಪ್ರದರ್ಶನದಲ್ಲಿ ವಿಶೇಷವಾಗಿ ಕನ್ನಡದ ಪ್ರಥಮಗಳ ಪುಸ್ತಕಗಳ ಪ್ರದರ್ಶನ ಮಾಡಲಾಗಿದೆ.

ಸಾಹಿತ್ಯ ಸಮ್ಮೇಳನ ನಡೆಯುವ 6,7 ಮತ್ತು 8 ರಂದು ಸಂಜೆ 7 ಗಂಟೆಯಿಂದ 10 ಗಂಟೆಯ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗಿದೆ.

‘ನಾವಾಡುವ ನುಡಿಯೇ ಕನ್ನಡ ನುಡಿ’ ಶೀರ್ಷಿಕೆ ಅಡಿಯಲ್ಲಿ ಚಲನಚಿತ್ರ ಗೀತೆಗಳ ಗಾಯನ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಯಲಿದೆ. ಜೊತೆಗೆ ಗಂಗಾವತಿ ಪ್ರಾಣೇಶ್‌ ಅವರ ವತಿಯಿಂದ ಹಾಸ್ಯ ಕಾರ್ಯಕ್ರಮ ನಡೆಯಲಿದೆ.

86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅಂಗವಾಗಿ 86 ಸಾಧಕರಿಗೆ ಸನ್ಮಾನ ಮತ್ತು 86 ಕೃತಿಗಳನ್ನು ಬಿಡುಗಡೆ ಮಾಡುತ್ತಿರು ವುದು ಸಾಹಿತ್ಯ ಸಮ್ಮೇಳನದ ವಿಶೇಷವಾಗಿದೆ.

 
Read E-Paper click here