Sunday, 15th December 2024

ಎಚ್ಡಿಕೆ ವಿರುದ್ದ ಶ್ರದ್ಧಾಂಜಲಿ ಪೋಸ್ಟರ್ ಹರಿಬಿಟ್ಟ ವಾಸು ಬೆಂಬಲಿಗರು

ತುಮಕೂರು: ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಪೋಸ್ಟರ್ ಸೃಷ್ಟಿಸಿ ಜಾಲತಾಣದಲ್ಲಿ ಹರಿಬಿಡುತ್ತಿರುವ ಚಾಳಿ ಹೆಚ್ಚುತ್ತಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಗುಬ್ಬಿ ಶಾಸಕ ಶ್ರೀನಿವಾಸ್ ಜೆಡಿಎಸ್ ಪಕ್ಷಕ್ಕೆ ಮತ ನೀಡಿಲ್ಲವೆಂದು ಜೆಡಿಎಸ್ ಕಾರ್ಯಕರ್ತರು ಶಾಸಕ ಶ್ರೀನಿವಾಸ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಪೋಸ್ಟರ್ ಹರಿಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಶ್ರೀನಿವಾಸ್ ಬೆಂಬಲಿಗರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ದ ಸಿಡಿದೆದ್ದು ಶ್ರದ್ಧಾಂಜಲಿ ಪೋಸ್ಟರ್ ಸೃಷ್ಟಿಸಿ ಸಾಮಾಜಿಕ ಜಾಲತಾಣ ದಲ್ಲಿ ಹರಿಬಿಟ್ಟಿದ್ದಾರೆ.