Sunday, 15th December 2024

ಉಪ್ಪು ತಿಂದವರು ನೀರು ಕುಡಿಯಲಿ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಅಶ್ಲೀಲ ವೀಡಿಯೋಗೂ ಜೆಡಿಎಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಉಪ್ಪು ತಿಂದವರು ನೀರು ಕುಡಿಯಲಿ. ಪ್ರಜ್ವಲ್ ರೇವಣ್ಣ ಪರಾರಿಯಾಗಿದ್ದರೆ ಎಸ್‌ಐಟಿ ಕರೆದುಕೊಂಡು ಬರುತ್ತೆ ಬಿಡಿ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ತನಿಖೆಯಿಂದ ಸತ್ಯಾಂಶಗಳು ಹೊರಬರುವವರೆಗೆ ಕಾಯಲು ಬಯಸುತ್ತೇನೆ ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗುವುದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ, ಅಗತ್ಯವಿದ್ದರೆ ಅವರನ್ನು ವಾಪಸ್ ಕರೆತರುವುದು ವಿಶೇಷ ತನಿಖಾ ತಂಡದ (ಎಸ್‌ಐಟಿ) ಜವಾಬ್ದಾರಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದಾರೆ ಎನ್ನಲಾದ ಕೆಲವು ಅಶ್ಲೀಲ ವೀಡಿಯೊ ತುಣುಕುಗಳು ಇತ್ತೀಚಿನ ದಿನಗಳಲ್ಲಿ ಹಾಸನದಲ್ಲಿ ಹರಿದಾಡಲು ಪ್ರಾರಂಭಿಸಿವೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಕಣಕ್ಕಿಳಿದಿದ್ದಾರೆ.