Wednesday, 11th December 2024

ಎಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ , ಮಾಜಿ ಸಿಎಂ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮೊದಲಾದವರಿದ್ದರು.ಮಂಡ್ಯ ಜಿ‍ಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ತಮ್ಮ ತಂದೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ತಾಯಿ ಚನ್ನಮ್ಮ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಕುಮಾರಸ್ವಾಮಿಯವರ ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಹಿರಿಯ ನಾಯಕ ಯಡಿಯೂ ರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ಮೊದಲಾದವರು ಹಾಜರಿದ್ದರು.