Friday, 13th December 2024

ಫೆ.೩ರಂದು ತಿಪಟೂರಿಗೆ ಎಚ್.ಡಿ.ಕೆ.ಭೇಟಿ

ತಿಪಟೂರು : ತಿಪಟೂರು ನಗರಕ್ಕೆ ಫೆ.೩ ರ ಶುಕ್ರವಾರದಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಲಿದ್ದು, ಕೆ.ಟಿ.ಶಾಂತ ಕುಮಾರ್‌ರನ್ನು ಅಧಿಕೃತವಾಗಿ ಪಕ್ಷಕ್ಕೆ ಅವರ ಸಮ್ಮುಖದಲ್ಲಿ ಸೇರ್ಪಡೆ ಮಾಡಿಕೊಳ್ಳ ಲಾಗುವುದು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಅಂಜನಪ್ಪ ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಜಿಲ್ಲಾ ಜೆಡಿಎಸ್ ಘಟಕ ಹಾಗೂ ಕೆ.ಟಿ.ಶಾಂತ ಕುಮಾರ್ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಕಳೆದ ಹಲವು ತಿಂಗಳುಗಳಿ0ದ ತಿಪಟೂರು ತಾಲ್ಲೂಕಿನ ಜೆಡಿಎಸ್ ಪಕ್ಷ ಸಂಘಟನೆ ಮಾಡಲು, ಮನ್ನಡೆಸಲು ನಾಯಕತ್ವದ ಕೊರತೆ ಇತ್ತು. ಆದರೆ ಕೆ.ಟಿ.ಶಾಂತ ಕುಮಾರ್ ತಾಲ್ಲೂಕಿನಲ್ಲಿ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಸೂಚಿಸಿರುವಂತೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.

ಈಗಾಗಲೇ ರಾಜ್ಯದಲ್ಲಿ ರಾಷ್ಟಿçÃಯ ಪಕ್ಷಗಳಿಂದ ಬೇಸರಗೊಂಡಿರುವ ಜನತೆ ಈ ಬಾರಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ಗೆ ಅತೀ ಹೆಚ್ಚಿನ ಬೆಂಬಲವನ್ನು ನೀಡಿದ್ದಾರೆ. ಈ ನಿಟ್ಟಿನಲ್ಲಿ ತಿಪಟೂರು ತಾಲ್ಲೂಕಿನಲ್ಲಿಯೂ ಜನರಿಂದ ಉತ್ತಮ ಸ್ಪಂದನೆ ಇದ್ದು ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯೂ ಬಲಗೊಳ್ಳಲಿದೆ ಎಂದರು.

ಸಮಾಜ ಸೇವಕ ಕೆ.ಟಿ.ಶಾಂತಕುಮಾರ್ ಮಾತನಾಡಿ ಈಗಾಗಲೇ ವರಿಷ್ಠರೊಂದಿಗೆ ಮಾತ ನಾಡಿದ್ದು, ಪಕ್ಷ ಸಂಘಟನೆಯ ಜವಾಬ್ದಾರಿ ನೀಡಿದ್ದಾರೆ. ಫೆ.೩ ರಂದು ಅಧಿಕೃತವಾಗಿ ಎಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಲಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರಲು ೧೨೩ ಸ್ಥಾನಗಳಲ್ಲಿ ತಿಪಟೂರು ಒಂದು ಕ್ಷೇತ್ರವನ್ನು ಸೇರಿಸಬೇಕು ಎಂಬ ಹಂಬಲವಿದೆ. ಈ ನಿಟ್ಟಿನಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರೊಂದಿಗೆ ಬೆರೆತು ಪಕ್ಷ ಸಂಘಟನೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಜೆಡಿಎಸ್‌ನ ಉಪಾಧ್ಯಕ್ಷ ಗಂಗಣ್ಣ, ಪ್ರಧಾನ ಕಾರ್ಯದರ್ಶಿ ಬೆಳ್ಳಿ ಲೋಕೇಶ್, ಜಿಲ್ಲಾ ಉಪಾಧ್ಯಕ್ಷ ದೇವರಾಜು, ತಾಲ್ಲೂಕು ಕಾರ್ಯಧ್ಯಕ್ಷ ಸೂಗೂರು ಶಿವಸ್ವಾಮಿ, ಮಾಜಿ ನಗರಸಭಾ ಸದಸ್ಯೆ ರೇಖಾ ಅನುಪ್, ತಾ.ಪಂ.ಮಾಜಿ ಸದಸ್ಯ ನಾಗರಾಜು, ಯುವ ಮೋರ್ಚಾದ ಪ್ರಕಾಶ್, ರಾಕೇಶ್, ಗುರುಪ್ರಸನ್ನ, ಬಾಳೇಕಾಯಿ ಸ್ವಾಮಿ ಸೇರಿದಂತೆ ಹಲವು ಇದ್ದರು.

*

ತಿಪಟೂರು ವಿಧಾನಸಭೆಯ ಟಿಕೆಟ್ ಆಕಾಂಕ್ಷಿಯಾಗಿರುವುದು ಸತ್ಯದ ಸಂಗತಿ. ದೇವೇಗೌಡರು ನನ್ನನ್ನು ಮನೆಯ ಮಗ ಎಂದುಕೊ0ಡಿದ್ದಾರೆ. ಅವರ ಮಾತಿಗೆ ಬದ್ಧನಾಗಿದ್ದು ಪಕ್ಷ ಸಂಘಟನೆ ಮಾಡುತ್ತೇನೆ. ಟಿಕೆಟ್ ಕೊಡುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದರು.

ಜಕ್ಕನಹಳ್ಳಿ ಲಿಂಗರಾಜು, ಹಿರಿಯ ಮುಖಂಡ, ತಿಪಟೂರು