Friday, 13th December 2024

ನಾಮಪತ್ರ ಸಲ್ಲಿಸಿದ ಹೊಳೆನರಸೀಪುರ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ. ರೇವಣ್ಣ

ಹಾಸನ: ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಡಿ. ರೇವಣ್ಣ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಹಲವು ದೇಗುಲಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಹೆಚ್. ಡಿ. ರೇವಣ್ಣ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ರೋಡ್ ಶೋ ನಡೆಸಿದ್ದು, ಬಳಿಕ ವಿವಿಧ ದೇವಸ್ಥಾನಗಳಿಗೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ತಾಲೂಕು ಕಚೇರಿಗೆ ತೆರಳಿ ಹೆಚ್.ಡಿ. ರೇವಣ್ಣ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಪತ್ನಿ ಭವಾನಿ ರೇವಣ್ಣ, ಪುತ್ರ ಸೂರಜ್ ರೇವಣ್ಣ ಸಾಥ್ ನೀಡಿದ್ದಾರೆ.