Thursday, 19th September 2024

ಜಿಲ್ಲೆಯ ನಾಲ್ಕು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೆ ಸರ್ಕಾರಕ್ಕೆ ಶಿಫಾರಸ್ಸು

ಚಿಕ್ಕಬಳ್ಳಾಪುರ: ಜಿಲ್ಲೆಯ ನಾಲ್ಕು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರ ಲಿವೆ. ಈ ಸಂಬ೦ಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸರ್ಕಾರಕ್ಕೆ ಪ್ರಸ್ತಾವ ಸಹ ಸಲ್ಲಿಸಿದೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ, ಚಿಂತಾಮಣಿ ತಾಲ್ಲೂಕಿನ ಕೈವಾರ, ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಮತ್ತು ಗೌರಿಬಿದನೂರು ತಾಲ್ಲೂಕಿನ ತೊಂಡೇಬಾವಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವವನ್ನು ಸರ್ಕಾರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಲ್ಲಿಸಿದೆ. ಜಿಲ್ಲೆಯ ನಾಲ್ಕೂ ತಾಲ್ಲೂಕುಗಳಿಗೆ ತಲಾ ಒಂದರ0ತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೇರಲಿವೆ.

ಸಮುದಾಯ ಆರೋಗ್ಯ ಕೇಂದ್ರಗಳಾಗಿ ಇವು ಮೇಲ್ದರ್ಜೆಗೇರಿದರೆ ಆರೋಗ್ಯ ಕೇಂದ್ರ ಗಳಲ್ಲಿ ದೊರೆಯುವ ಸೌಲಭ್ಯಗಳು ಸಹ ಹೆಚ್ಚಲಿವೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ತ್ರೀರೋಗ ತಜ್ಞರು, ದಂತ ವೈದ್ಯರು ಸೇರಿದಂತೆ ಐದು ಮಂದಿ ವೈದ್ಯರು ಕಾರ್ಯನಿರ್ವಹಿಸುವರು. ಶುಶ್ರೂಷಕರ ಸಂಖ್ಯೆಯೂ ಹೆಚ್ಚಲಿದೆ. ಈ ಎಲ್ಲ ದೃಷ್ಟಿಯಿಂದ ಪಿಎಚ್‌ಸಿಗಳು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರುವುದು ಜನರಿಗೆ ಅನುಕೂಲವಾಗಲಿದೆ.

ರೆಡ್ಡಿಗೊಲ್ಲರಹಳ್ಳಿಯಲ್ಲಿ ಉಗ್ರಾಣ: ಆರೋಗ್ಯ ಇಲಾಖೆಯು ಇಲ್ಲಿಯವರೆಗೆ ಕೋಲಾರದ ಔಷಯ ಉಗ್ರಾಣದಿಂದ ಪ್ರತಿ ತಿಂಗಳು ಜಿಲ್ಲೆಗೆ ಅಗತ್ಯವಿರುವ ಔಷಗಳನ್ನು ತರಿಸಿಕೊಳ್ಳುತ್ತಿದೆ. ಇದಕ್ಕೆ ಕಾರಣ ಜಿಲ್ಲೆಯಲ್ಲಿ ಇಲ್ಲಿಯವರೆಗೂ ಔಷಧ ಸಂಗ್ರಹಕ್ಕೆ ಸೂಕ್ತ ಉಗ್ರಾಣದ ವ್ಯವಸ್ಥೆ ಇಲ್ಲದಿರುವುದೇ ಆಗಿದೆ.

ಆದರೆ ಈಗ ಚಿಕ್ಕಬಳ್ಳಾಪುರ ತಾಲ್ಲೂಕಿನ ರೆಡ್ಡಿಗೊಲ್ಲಾರಹಳ್ಳಿ ಬಳಿ ಆರೋಗ್ಯ ಇಲಾಖೆಯಿಂದ ಔಷಧ ಸಂಗ್ರಹಕ್ಕೆ ಉಗ್ರಾಣ ನಿರ್ಮಾಣವಾಗುತ್ತಿದೆ. ಇಲ್ಲಿಯೇ ಲಸಿಕೆ ಸಂಗ್ರಹಕ್ಕೂ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾ ಆರೋಗ್ಯ ಇಲಾಖೆ ಮುಂದಾಗಿದೆ. ನಾಲ್ಕು ಎಕರೆ ವಿಸ್ತೀರ್ಣದಲ್ಲಿ ಇಲ್ಲಿ ಔಷಧ ಉಗ್ರಾಣ ಸೇರಿದಂತೆ ವಿವಿಧ ಕಟ್ಟಡಗಳು ನಿರ್ಮಾಣವಾಗುತ್ತಿರುವುದು ಮುಂದಿನ ದಿನಗಳಲ್ಲಿ ಚಿಕ್ಕಬಳ್ಳಾಪುರ ಮೆಡಿಕಲ್ ಹಬ್ ಆಗುವುದರ ಸೂಚನೆಯಾಗಿದೆ.
Read E-Paper click here