ಉಡುಪಿ: ಉಡುಪಿ ಆದರ್ಶ ಆಸ್ಪತ್ರೆಯ ವೈದ್ಯ ಹಾಗೂ ಹಿರಿಯ ನರರೋಗ ತಜ್ಞ ಡಾ.ರಾಜಾ ರವಿವಾರ ಹೃದಯಾಘಾತದಿಂದ ನಿಧನರಾದರು.
ಮಣಿಪಾಲದ ರಾಜೀವನಗರದ ಮನೆಯಲ್ಲಿ ಬೆಳಗ್ಗೆ ಹೃದಯಾಘಾತಕ್ಕೆ ಒಳಗಾದ ಇವರನ್ನು ಕೂಡಲೇ ಉಡುಪಿ ಆದರ್ಶ ಆಸ್ಪತ್ರೆಗೆ ಕರೆತರಲಾಯಿತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.
ಇವರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಅದಮಾರು ಮಠದ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹಾಗೂ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.