ಹುಬ್ಬಳ್ಳಿ; ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯು ಭಾರ ಕುಸಿತದ ಪರಿಣಾಮವಾಗಿ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ.
ಭಾರತೀಯ ಹವಾಮಾನ ಇಲಾಖೆ ಇಂದು ಮತ್ತು ನಾಳೆ ಉತ್ತರ ಕರ್ನಾಟಕದ ಹತ್ತು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ಬೆಳಗಾವಿ, ಉತ್ತರ ಕನ್ನಡ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ಬೆಳಿಗ್ಗೆಯಿಂದಲೂ ಈ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ನದಿ ತಟದ ಹಾಗೂ ಮಣ್ಣಿನ ಮನೆಯಲ್ಲಿ ವಾಸ ಮಾಡುವ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದು, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಿವೆ.
ಯಾದಗಿರಿಯ ನರಿಬೋಳದಲ್ಲಿ ವ್ಯಕ್ತಿಯೊಬ್ಬ ಭೀಮಾ ನದಿಯಲ್ಲಿ ಕೊಚ್ಚಿ ಹೋಗಿರುವುದು ವರದಿಯಾಗಿದೆ.