Wednesday, 11th December 2024

ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವು

ಶಿರಸಿ/ಕಾರವಾರ: ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ಕಾರವಾರದ ಅಸ್ನೋಟಿಯ ಆರವ ಗ್ರಾಮದ ತೋರ್ಲೆಭಾಗ ದಲ್ಲಿ ಶುಕ್ರವಾರ ನಡೆದಿದೆ. ಗುಲಾಬಿ ರಾಮಚಂದ್ರ ಮಾಂಜ್ರೇಕರ್ (70) ಮೃತ ದುರ್ದೈವಿ.

ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ವೃದ್ಧೆ, ಚಿತ್ತಾಕುಲದಲ್ಲಿ ಹಣ್ಣಿನ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. ನೆನ್ನೆ ಮಧ್ಯಾಹ್ನ ಮನೆಯ ಪಕ್ಕದ ಹಳೆಯ ಕಟ್ಟಡದ ಬಳಿ ತೆರಳಿದ್ದಾಗ ಮೈಮೇಲೆ ಗೋಡೆ ಕುಸಿದಿದೆ. ಗೋಡೆಯ ಅವಶೇಷಗಳಡಿ ವೃದ್ಧೆ ಮುಚ್ಚಿಹೋಗಿದ್ದರಂದ ಇಂದು ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ತಹಸೀಲ್ದಾರ್ ನಿಶ್ಚಲ ನೊರೋನ್ಹಾ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.