Friday, 13th December 2024

ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

ಮಾನ್ವಿ: ಪಟ್ಟಣದಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿನ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಕಂದಾಯ ಇಲಾಖೆಯ ಅಧಿಕಾರಿ ಗಳ ಸಭೆ ನಡೆಸಿ ನಂತರ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರೀಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪೂರೈಕೆ ಯಾಗಿರುವ ಸೋಪು, ಬೆಡ್‌ಶೀಟ್ ಸೇರಿದಂತೆ ಇತರೆ ದಿನ ನಿತ್ಯ ಬಳಕೆಯ ವಸ್ತುಗಳ ಗುಣಮಟ್ಟವನ್ನು ಪರಿಶೀಲಿಸಿ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ರವೀಂದ್ರ ಉಪ್ಪಾರ ರಿಂದ ಮಾಹಿತಿ ಪಡೆದರು.

ನಂತರ ವಿದ್ಯಾರ್ಥಿಗಳಿಂದ ವಸತಿ ನಿಲಯದಲ್ಲಿ ನೀಡುವ ಆಹಾರದ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದುಕೊಂಡರು. ವಿದ್ಯಾರ್ಥಿಗಳು ತಮ್ಮ ಕೊಠಡಿಗಳನ್ನು ಸ್ವಚ್ಚವಾಗಿಟ್ಟುಕೊಳ್ಳುವ ಮೂಲಕ ಉತ್ತಮ ಓದುವ ವಾತಾವರಣ ರೂಪಿಸಿ ಕೊಳ್ಳಿ ವಸತಿ ನಿಲಯಗಳಲ್ಲಿನ ಶೌಚಾಲಯಗಳನ್ನು ಸ್ವಚ್ಚವಾಗಿಟ್ಟು ಕೊಳ್ಳುವಂತೆ ತಿಳಿಸಿದರು.

ಪಟ್ಟಣದ ಪರಿಶಿಷ್ಟ ವರ್ಗದ ಮೇಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಹಸೀಲ್ದಾರ್ ಚಂದ್ರಕಾ0ತ್ ಎಲ್.ಡಿ,ಗ್ರೇಡ್-೨ ತಹಸೀಲ್ದಾರ್ ಅಬ್ದುಲ್ ವಾಹಿದ್, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಹಾಲಿಂಗಪ್ಪ ಹಿಂಗಳದಾಳ,ಶಿಶುಅಭಿವೃದ್ದಿ ಅಧಿಕಾರಿ ಸುಭದ್ರದೇವಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.