ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2024-25ನೇ ಸಾಲಿನ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ (Hostel Admission) (ವೃತ್ತಿಪರ ಪದವಿ ಮತ್ತು ಸ್ನಾತಕೊತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪ.ಜಾತಿ / ಪ.ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಅಕ್ಟೋಬರ್ 30 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in ಅನ್ನು ನೋಡಬಹುದು.
ಈ ಸುದ್ದಿಯನ್ನೂ ಓದಿ | Election Commission Of India: ರಾಷ್ಟ್ರಮಟ್ಟದ ಮಾಧ್ಯಮ ಪ್ರಶಸ್ತಿ 2024; ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಉಪ ನಿರ್ದೇಶಕರು / ತಾಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿವಿ ಟವರ್, ಅಂಬೇಡ್ಕರ್ ವೀದಿ ಬೆಂಗಳೂರು-01 ಇವರನ್ನು ಅಗತ್ಯ ದಾಖಲೆಗಳೊಂದಿಗೆ ಅಥವಾ ಸಹಾಯವಾಣಿ ಸಂಖ್ಯೆ 8050770004, 8050770005 ಅಥವಾ ದೂರವಾಣಿ ಸಂಖ್ಯೆ 080-22867628 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.