Sunday, 6th October 2024

ತಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ: ಉಮೇಶ್ ವಿ.ಕತ್ತಿ

ಮಳವಳ್ಳಿ: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ತಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ ಎಂದು ಅರಣ್ಯ ಮತ್ತು ಆಹಾರ ನಾಗರೀಕ ಪೂರೈಕೆ ಸಚಿವ ಉಮೇಶ್ ವಿ.ಕತ್ತಿ ತಿಳಿಸಿದರು.

ಮುಖ್ಯ ಮಂತ್ರಿ ಬದಲಾವಣೆ ಕೇವಲ ಊಹಾಪೋಹವಾಗಿದೆ. ಮುಖ್ಯಮಂತ್ರಿ ಬಸವರಾಜು ಬೊಮ್ಮಯಿ ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸಲಿದ್ದೇವೆಂದು ಹೇಳಿ ದರು.

ತಾನು ಕೂಡ 8 ಬಾರಿ ಶಾಸಕನಾಗಿ ಆಯ್ಕೆಯಾಗಿ, ಹಲವು ಖಾತೆಗಳ ಸಚಿವವಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಮುಖ್ಯಮಂತ್ರಿಯಾಗಿ ನಾಡಿನ ಜನರ ಸೇವೆ ಸಲ್ಲಿಸುವ ಹಂಬಲ ಹೊಂದಿ ದ್ದೇನೆಂದು ತಿಳಿಸಿದರು.

ಯಡಿಯೂರಪ್ಪ ಅವರನ್ನು ಎಂದಿಗೂ ಕಡೆಗಣಿಸಿಲ್ಲ. ಮೇಕೆದಾಟು ಯೋಜನೆ ಜಾರಿ ಮಾಡಲು ತಮಿಳುನಾಡು ಸರ್ಕಾರ ಅವಕಾಶ ಮಾಡಿಕೊಡಬೇಕು. ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿರುವುದರಿಂದ ಮೇಕೆದಾಟು ಯೋಜನೆ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಹೇಳಿದರು.