Saturday, 14th December 2024

ವೀರಾಂಜನೇಯಸ್ವಾಮಿ ದೇವಸ್ಥಾನ ಉದ್ಘಾಟನೆ

ಕೋಲಾರ: ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಸಾರ್ವಜನಿಕರ ಸಹಕಾರ ದೊಂದಿಗೆ ನಿರ್ಮಿಸಿರುವ ವೀರಾಂಜನೇಯ ಸ್ವಾಮಿ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮ ಆತ್ಯಂತ ವಿಜೃಂಭಣೆಯಿಂದ ಜರುಗಿತು.

ಹೋಮ, ಹವನ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸುವ ಮೂಲಕ ಆಂಜನೇಯ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಮಾಡಲಾಯಿತು.

ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯರು ಧಿವ್ಯ ಸಾನಿಧ್ಯ ವಹಿಸಿ ದ್ದರು. ಬೇಲೂರು ಹಿರೇಮಠದ ಪ್ರಭುಕುಮಾರ ಶಿವಾಚಾರ್ಯರು, ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು, ಶೀಲವಂತ ಹಿರೇಮಠದ ಕೈಲಾಸನಾಥ ಶ್ರೀಗಳು, ಶೀಲವಂತ ಹಿರೇಮಠದ ಕೈಲಾಸನಾಥ ಶ್ರೀಗಳು, ಖಾನ್ ಕಾಯೇ ಗಫ್ಫಾರೀಯಾ ಗುರುಕುಲದ ಬಕ್ತಿ ಯಾರ್ ಖಾನ್ ಪಠಾಣ ಸಾನಿಧ್ಯ ವಹಿಸಿದ್ದರು.

ಶಾಸಕ ಶಿವಾನಂದ.ಎಸ್ ಪಾಟೀಲ್, ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ, ವೃತ್ತ ನಿರೀಕ್ಷಕ ಸೋಮಶೇಖರ ಜಟ್ಟಲ್ ವೇದಿಕೆಯ ಮೇಲಿದ್ದರು.